
ಕೊಪ್ಪಳ : 17 ರಂದು ಮಹರ್ಷಿ ವಾಲ್ಮೀಕಿ ಜಯಂತಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 15- ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಅ. 17ರಂದು ಬೆಳಿಗ್ಗೆ ೧೧:೩೦ ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರು ಉದ್ಘಾಟಿಸುವರು. ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಶಾಸಕರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ರಂದೀಪ್ ಡಿ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನಿರ್ದೇಶಕರಾದ ಟಿ.ಯೋಗೇಶ್ ಅವರು ಆಗಮಿಸುವರು. ಕಲಬುರಗಿಯ ಡಾ.ಬಿ.ಆರ್ ಅಂಬೇಡ್ಕರ್ ಪದವಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಲೇಖಕರಾದ ಅರುಣ್ ಜೋಳದ ಕೂಡ್ಲಿಗಿ ಅವರಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ. ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ ೦೮.೩೦ ಗಂಟೆಗೆ ನಗರದ ಸಿರಸಪ್ಪಯ್ಯನಮಠದಿಂದ ಗಡಿಯಾರಕಂಬದ ಮಾರ್ಗವಾಗಿ ಅಶೋಕ ವೃತ್ತದ ಮೂಲಕ ಸಾಹಿತ್ಯ ಭವನದವರೆಗೆ ಶ್ರೀ ಮಹರ್ಷಿ ವಾಲ್ಮೀಕಿ ಅವರ ಭಾವಚಿತ್ರದ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ದಿ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜು ತಳವಾರ ಅವರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.