ಕೊಪ್ಪಳ : 3 ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 30- ಕೊಪ್ಪಳ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕೊಪ್ಪಳ ನಗರಸಭೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲೆಯ ಎಲ್ಲಾ ಎಮ್.ಆರ್,ಡಬ್ಲೂ, ಯು.ಆರ್.ಡಬ್ಲೂ, ವಿ.ಆರ್.ಡಬ್ಲೂ, ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ ಮತ್ತು ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ-೨೦೨೪ರ ವೇದಿಕೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಡಿಸೆಂಬರ್ ೩ರಂದು ಮಧ್ಯಾಹ್ನ ೧೨.೩೦ ಗಂಟೆಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಸಂಗಪ್ಪ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಳರ್, ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಮತ್ತು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಸಂಸದರಾದ ಕೆ.ರಾಜಶೇಖರ ಹಿಟ್ನಾಳ, ಗಂಗಾವತಿ ಶಾಸಕರಾದ ಜಿ.ಜನಾರ್ಧನರೆಡ್ಡಿ, ವಿಧಾನ ಪರಿಷತ್ ಸದಸ್ಯರಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ತುಂಗಭದ್ರಾ ಯೋಜನೆಯ ಅಧ್ಯಕ್ಷರಾದ ಹಸನಸಾಬ ನಭಿಸಾಬ ದೋಟಿಹಾಳ ಹಾಗೂ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀನಿವಾಸ್ ಗುಪ್ತಾ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಕೆ.ಪಿ ಮೋಹನ್ ರಾಜ್, ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ರಾಮ್ ಎಲ್ ಅರಸಿದ್ದಿ ಅವರು ಭಾಗವಹಿಸುವರು.

ಕಾರ್ಯಕ್ರಮದ ಅಂಗವಾಗಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಕೊಪ್ಪಳ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಂತೇಶ್ ಎಸ್. ದರಗದ ಕಾನೂನು ಅರಿವು ಉಪನ್ಯಾಸ ನೀಡುವರು.

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ ಶೆಟ್ಟಪ್ಪನವರ ಪಾಲ್ಗೊಳ್ಳುವರು.

“ಸಮಗ್ರ ಮತ್ತು ಸುಸ್ಥಿರ ಭವಿಷ್ಯಕ್ಕಾಗಿ ವಿಕಲಚೇತನ ವೈಕ್ತಿಗಳಲ್ಲಿ ನಾಯಕತ್ವಕ್ಕೆ ಉತ್ತೇಜನ” ಎಂಬುದು ವಿಶ್ವ ವಿಕಲಚೇತನರ ದಿನಾಚರಣೆ-೨೦೨೪ರ ಘೋಷ ವಾಕ್ಯವಾಗಿದೆ. ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಡಿ.೩ರ ಬೆಳಿಗ್ಗೆ ೯ ಗಂಟೆಗೆ ನಗರದ ಕೇಂದ್ರಿಯ ಬಸ್ ನಿಲ್ದಾಣದಿಂದ ತಾಲೂಕು ಕ್ರೀಡಾಂಗಣದವರೆಗೆ ನಡೆಯಲಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ವೆಂಕಟೇಶ ದೇಶಪಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!