
20 ರಂದು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 16- ಕೊಪ್ಪಳ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜೂನ್ 20 ರಂದು ಮಧ್ಯಾಹ್ನ 03 ಗಂಟೆಗೆ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನು ಆಯೋಜಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಬಾಲಚಂದ್ರನ್ ಸ್ಯಾಮುಯೆಲ್ ಅವರು ವಹಿಸಿಕೊಳ್ಳುವರು. ಆದ್ದರಿಂದ ಗ್ಯಾರಂಟಿ ಯೋಜನೆಗಳ ಅನುಷ್ಠಾನಾಧಿಕಾರಿಗಳು ಅಗತ್ಯ ಮಾಹಿತಿಯೊಂದಿಗೆ ಸಭೆಗೆ ಖುದ್ದಾಗಿ ಹಾಜರಾಗಬೇಕು ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ದುಂಡಪ್ಪ ತುರಾದಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.