
ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಕುಷ್ಟಗಿ ತಾಲ್ಲೂಕಇನ ತೋಪಾಲಕಟ್ಟಿ ಸೀಮಾದ ಫಕೀರಗೌಡ ಎಂಬ ವ್ಯಕ್ತಿಯ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ) ನ್ಯಾಯಾಧೀಶರಾದ ಕುಮಾರ ಡಿ.ಕೆ ಅವರು ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 20,000 ಗಳ ದಂಡವನ್ನು ವಿಧಿಸಿ ತೀರ್ಪು ಪ್ರಕಟಿಸಿದ್ದಾರೆ.
ಕುಷ್ಟಗಿ ಪೊಲೀಸ್ ಠಾಣೆ ವ್ಯಾಪ್ತಿಯ ತೋಪಾಲಕಟ್ಟಿ ಸೀಮಾದಫಕೀರಗೌಡ ಇತನು ಕುರಿ ಮೇಯಿಸಲು ಹೋಗುತ್ತಿದ್ದು, ಜಮೀನನಲ್ಲಿ ತನ್ನ ಕುಟುಂಬದೊAದಿಗೆ ಅಪ್ರಾಪ್ತೆ ವಾಸವಾಗಿದ್ದು, ಈ ಅಪ್ರಾಪ್ತೆಗೆ ಪರಿಚಯ ಮಾಡಿಕೊಂಡು ಪ್ರೀತಿಸಿ ದಿನಾಂಕ : 07-02-2023 ರಂದು ಅಪ್ರಾಪ್ತೆಯ ಮನೆಗೆ ನೀರು ಕುಡಿಯಲು ಬಂದು ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ ಅತ್ಯಾಚಾರ ಎಸಗಿರುವ ಆರೋಪದ ಹಿನ್ನಲೆಯಲ್ಲಿ ಕುಷ್ಟಗಿ ಪೊಲೀಸ್ ಠಾಣೆಯ ಪಿ.ಎಸ್.ಐ ಮೌನೇಶ ರಾಠೋಡ ಅವರು ಪ್ರಕರಣ ದಾಖಲಿಸಿಕೊಂಡು ಈ ಪ್ರಕರಣದ ತನಿಖೆಯನ್ನು ಕುಷ್ಟಗಿ ಗ್ರಾಮೀಣ ವೃತ್ತದ ಸಿಪಿಐ ನಿಂಗಪ್ಪ ಎನ್.ಆರ್ ಮತ್ತು ಯಶವಂಯ ಬಿಸನಳ್ಳಿ ಅವರು ತನಿಖೆ ನಡೆಸಿದ ಫಕೀರಗೌಡ ಎಂಬ ಆರೋಪಿತನ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಈ ಪ್ರಕರಣವು ಸ್ಪೇ.ಎಸ್.ಸಿ (ಪೋಕ್ಸೋ) ಸಂ: 45/2023 ರಲ್ಲಿ ದಾಖಲಾಗಿದ್ದು, ವಿಚಾರಣೆಯನ್ನು ನಡೆಸಿದ ತ್ವರಿತ ವಿಲೇವಾರಿ ನ್ಯಾಯಾಲಯ(ಪೋಕ್ಸೋ)ವು ಆರೋಪಿ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ದಿನಾಂಕ 14-08-2024 ರಂದು ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಹಾಗೂ ರೂ. 20,000 ಗಳ ದಂಡವನ್ನು ವಿಧಿಸಿ ತೀರ್ಪು ನೀಡಿದೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ (ಪೋಕ್ಸೋ) ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು ಎಂದು ನ್ಯಾಯಾಲಯದ ಪ್ರಕಟಣೆ ತಿಳಿಸಿದೆ.