
20 ರಂದು ವಿಶ್ವ ಗ್ರಾಹಕರ ದಿನಾಚರಣೆ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ,19- ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ವತಿಯಿಂದ “ಪ್ರಸ್ತುತ ಗ್ರಾಹಕರಿಗೋಸ್ಕರ ಗುಣಮಟ್ಟ ಹಾಗೂ ಜವಾಬ್ದಾರಿಯುತ ಕೃತಕ ಬುದ್ದಿಮತ್ತೆ” ಎಂಬ ಘೋಷವಾಕ್ಯದಡಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವನ್ನು ಮಾ.20 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಕೋಟೆ ಪ್ರದೇಶದ ಶ್ರೀಮೇದಾ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನ ಅವರು ತಿಳಿಸಿದ್ದಾರೆ.