
2024ನೇ ಎಸ್ಎಸ್ಎಲ್ ಸಿ ಪರೀಕ್ಷೆಗಳು-2 ಪೂರ್ವ ಸಿದ್ದತೆ ಬಿಇಒ ಸೂಚನೆ
ಕರುನಾಡ ಬೆಳಗು ಸುದ್ದಿ
ವಿಜಯನಗರ, 16-: ದಿನಾಂಕ: 13/05/2024 ರಂದು ಮಾನ್ಯ ಪ್ರಧಾನ ಕಾರ್ಯದರ್ಶಿಗಳು, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಸೂಚಿಸಿದಂತೆ , ಈ ಕುರಿತು ದಿ.14/05/2024 ರಂದು ಹೊಸಪೇಟೆ ತಾಲೂಕಿನ ಎಲ್ಲಾ 81 ಪ್ರೌಢ ಶಾಲಾ ಮುಖ್ಯಗುರುಗಳ ಸಭೆಯನ್ನು ಎಂ.ಚೆನ್ನಬಸಪ್ಪ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹೊಸಪೇಟೆ ಇವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿ ಸಭೆಯಲ್ಲಿ ಕೆಲವು ವಿಷಯಗಳ ಕುರಿತು ಸೂಚನೆಗಳನ್ನು ತಿಳಿಸಲಾಯಿತು.
2023-24 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗಳು-1 ರಲ್ಲಿ ಅನುತ್ತೀರ್ಣಗೊಂಡ ಹಾಗೂ ಮುಂದಿನ ತರಗತಿಗೆ ತೆರಳಲು ಅರ್ಹರಾಗದೇ ಇರುವ ಎಲ್ಲಾ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ನೋಂದಣಿ ಮಾಡಿಸಲು, ಪ್ರಸ್ತುತ ಪಡೆದಿರುವ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಲು ಆಸಕ್ತಿ ಹೊಂದಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ-2 ರಲ್ಲಿ ಫಲಿತಾಂಶ ಉತ್ತಮಪಡಿಸಿಕೊಳ್ಳಲು ಅವಕಾಶ ನೀಡಿರುವುದರಿಂದ ಅಂತಹ ವಿದ್ಯಾರ್ಥಿಗಳನ್ನು ಪುನರ್ ನೋಂದಣಿಯನ್ನು ಮಾಡಲು, ಈ ಎಲ್ಲಾ ವಿದ್ಯಾರ್ಥಿಗಳಿಗೆ ದಿನಾಂಕ.15/05/2024 ರಿಂದ ಶಾಲಾ ಹಂತದಲ್ಲಿ ವಿಶೇಷ ಬೋಧನಾ ತರಗತಿಗಳನ್ನು ಕಡ್ಡಾಯವಾಗಿ ಹಮ್ಮಿಕೊಳ್ಳಲು,
ಶಾಲಾವಾರು ವಿಷಯವಾರು ವೇಳಾಪಟ್ಟಿಯನ್ನು ಸಿದ್ದಪಡಿಸಿ, ವಿಶೇಷ ಬೋಧನಾ ತರಗತಿಗಳನ್ನು ದಿ.15/05/2024 ರಿಂದ 05/06/2024 ರ ವರೆಗೆ ಕಡ್ಡಾಯವಾಗಿ ಹಮ್ಮಿಕೊಳ್ಳಲು, ಸದರಿ ವಿಶೇಷ ಬೊಧನಾ ತರಗತಿಗಯಲ್ಲಿ ಪಾಲ್ಗೊಳ್ಳುವ ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮದ್ಯಾಹ್ನದ ಉಪಹಾರ ಯೋಜನೆಯ ಸೌಲಭ್ಯದಡಿಯಲ್ಲಿ ಊಟದ ವ್ಯವಸ್ಥೆಯನ್ನು ಜಾರಿಗೊಳಿಸಲು, ದಿನಾಂಕ: 15/03/2024 ಕ್ಕೆ ಹಿಂದಿನ ಶೈಕ್ಷಣಿಕ ಸಾಲಿನಲ್ಲಿ ಎಸ್ಎಸ್ಎಲ್ಸಿ ಓದುತ್ತಿದ್ದ ವಿದ್ಯಾರ್ಥಿಗಳ ಹಾಜರಾತಿಯು ಮಂಡಲಿಯ ನಿಯಮಾವಳಿಗಳನ್ವಯ ಶೇ 75% ಕಿಂತಲೂ ಕಡಿಮೆ ಇದ್ದಲ್ಲಿ ಅಂತಹ ವಿದ್ಯಾರ್ಥಿಗಳು ಪರೀಕ್ಷೆ-2 ರಲ್ಲಿ ಖಾಸಗಿ ವಿದ್ಯಾರ್ಥಿಗಳಾಗಿ ನೋಂದಾಯಿಸಲು ಮಂಡಳಿಯು ಅವಕಾಶ ಕಲ್ಪಿಸಿರುತ್ತಾರೆ, ಅನುತ್ತೀರ್ಣಗೊಂಡ ಮತ್ತು ಹಾಗೂ ಮಕ್ಕಳು ಹಾಗೂ ಪಾಲಕರನ್ನು ವೈಯಕ್ತಿವಾಗಿ ಸಂಪರ್ಕಿಸಿ, ಇಲಾಖೆಯಿಂದ ಹಮ್ಮಿಕೊಂಡಿರುವ ವಿಶೇಷ ಬೊಧನಾ ತರಗತಿಗಳಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಲು ಸಭೆಯಲ್ಲಿ ಸೂಚಿಸಲಾಯಿತು.
ಪರೀಕ್ಷೆಗಳು-2 ಕ್ಕೆ ನೊಂದಾಯಿಸಲು ಕೊನೆಯ ದಿನಾಂಕ: 16/05/2024 ಅಂತಿಮ ದಿನಾಂಕವಾಗಿರುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.