DSC_0711

20ರಂದು ಡಿ.ದೇವರಾಜ ಅರಸು ಜನ್ಮದಿನ : ಅಗತ್ಯ ಸಿದ್ಧತೆಗೆ ಸೂಚನೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 10- ಜಿಲ್ಲಾಡಳಿತದ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಆಗಸ್ಟ್ 20 ರಂದು ಆಚರಿಸಲಾಗುವ ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ನಡೆಯುವಂತೆ ಸಕಲ ಸಿದ್ಧತೆಗಳನ್ನು ಕೈಗೊಳ್ಳುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸೂಚನೆ ನೀಡಿದರು.

ಡಿ.ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಕುರಿತಂತೆ ಕೃಷಿ ಇಲಾಖೆ ಕಚೇರಿ ಸಭಾಂಗಣದಲ್ಲಿ ಆಗಸ್ಟ್ 09ರಂದು ಆಯೋಜಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆಗಸ್ಟ್ 20ರಂದು ಜಿಲ್ಲಾಮಟ್ಟದ ಕಾರ್ಯಕ್ರಮದ ಅಂಗವಾಗಿ ಮೆರವಣಿಗೆ ಸಾಗುವ ಮಾರ್ಗದ ರಸ್ತೆಗಳು ಹಾಗೂ ಸಾಹಿತ್ಯ ಭವನದ ಆವರಣವನ್ನು ಸ್ವಚ್ಛಗೊಳಿಸಬೇಕು. ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಯಿಂದ ಕೈಗೊಳ್ಳಬೇಕು. ಶಾದಿ ಮಹಲ್ ನಲ್ಲಿ ನಡೆಯುವ ವೇದಿಕೆ ಕಾರ್ಯಕ್ರಮ ಶಿಷ್ಟಾಚಾರದಂತೆ ನಡೆಸಬೇಕು. ಮೆರವಣಿಗೆ ಸಾಗುವ ಮಾರ್ಗಕ್ಕೆ ಸೂಕ್ತ ಪೋಲಿಸ್ ಬಂದೋಬಸ್ತ್ ಒದಗಿಸಬೇಕು.

ಡಿ.ದೇವರಾಜ ಅರಸ್ ಅವರ ಕುರಿತು ವಿಶೇಷ ಉಪನ್ಯಾಸದ ವ್ಯವಸ್ಥೆ ಮಾಡಬೇಕು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಇಲಾಖಾ ಮುಖ್ಯಸ್ಥರು ಹಾಗೂ ಸಿಬ್ಬಂದಿ ಕಡ್ಡಾಯ ಭಾಗವಹಿಸಬೇಕು ಎಂದರು.

2023-24ನೇ ಸಾಲಿನಲ್ಲಿ ಎಸ್ಎಸ್ಎಲ್.ಸಿ, ಪಿಯುಸಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಅತ್ಯಂತ ಹೆಚ್ಚು ಅಂಕಗಳಿಸಿದ ನಿಲಯಾರ್ಥಿಗಳನ್ನು ಗುರುತಿಸಿ ಸನ್ಮಾನ ಮಾಡುವುದು, ವಿದ್ಯಾರ್ಥಿ ನಿಲಯಗಳ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ, ರಸಪ್ರಶ್ನೆ, ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲು ಕ್ರಮ ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಪತ್ರಾಂಕಿತ ವ್ಯವಸ್ಥಾಪಕರಾದ ಬಿ.ವಿ ಮಠ ಅವರು ಮಾತನಾಡಿ, ಆಗಸ್ಟ್ 20ರಂದು ಬೆಳಿಗ್ಗೆ 8.30ಕ್ಕೆ ಡಿ.ದೇವರಾಜ ಅರಸು ಅವರ ಭಾವಚಿತ್ರದ ಮೆರವಣಿಗೆಯು ಶ್ರೀ ಗವಿಮಠದಿಂದ ಶಾದಿಮಹಲ್ ವರೆಗೆ ಗಡಿಯಾರ ಕಂಬದ ಮಾರ್ಗವಾಗಿ ನಡೆಯಲಿದೆ. ಬೆಳಿಗ್ಗೆ 10:30ಕ್ಕೆ ಶಾದಿಮಹಲ್ ನಲ್ಲಿ ವೇದಿಕೆ ಕಾರ್ಯಕ್ರಮ ನಡೆಸಲು ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಕೈಗೊಳ್ಳಲಾಗುತ್ತಿದೆ.

ಕಾರ್ಯಕ್ರಮಕ್ಕೆ ಉಪನ್ಯಾಸಕರನ್ನು ಸಹ ಈಗಾಗಲೇ ಗುರುತಿಸಲಾಗಿದೆ. ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲರ ಸಹಕಾರ ಅಗತ್ಯವಾಗಿದೆ ಎಂದರು ಹಾಗೂ ಜಯಂತಿ ಆಚರಣೆಯ ರೂಪರೇಷೆಗಳನ್ನು ಸಭೆಗೆ ವಿವರಿಸಿದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯ ನಿರ್ದೇಶಕರಾದ ಕೊಟ್ರೇಶ ಮರಬನಹಳ್ಳಿ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಗಣ್ಯರು ಹಾಗೂ ಸಂಘ-ಸAಸ್ಥೆಗಳ ಪದಾಧಿಕಾರಿಗಳು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಅಧಿಕಾರಿಗಳು, ಸಿಬ್ಬಂದಿ ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

error: Content is protected !!