2c136fae-be38-4577-97e1-318669006cc9

22 ರಂದು ಗಂಗಾವತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ,21- ಜಿಲ್ಲೆಯಾದ್ಯಂತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಮುಂದುವರೆದಿದ್ದು, ಇದರ ಅಂಗವಾಗಿ ಫೆ.22 ರಂದು ಜಾಥಾ ಮೆರವಣಿಗೆಯು ಗಂಗಾವತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಲಿದೆ.

ಗಂಗಾವತಿ ತಾಲ್ಲೂಕಿನ ಹಣವಾಳ, ಹೊಸಕೇರಾ, ಡಾಣಾಪುರ, ಜಂಗಮರ ಕಲ್ಗುಡಿ, ಶ್ರೀರಾಮನಗರ ಮತ್ತು ಚಿಕ್ಕಜಂತಕಲ್‌ನಲ್ಲಿ ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ ನಡೆಯಲಿದೆ. ಗ್ರಾಮಸ್ಥರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಅಗತ್ಯ ಸಹಕಾರ ನೀಡಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜು ತಳವಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!