2c136fae-be38-4577-97e1-318669006cc9

  22 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 20- ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2 ಮೇಲೆ ಇರುವ ಫೀಡರ್‍ಗಳ ಸಿ.ಟಿಗಳ ಬದಲಾಯಿಸುವ ಕಾರ್ಯ ಕೈಗೊಳ್ಳಲಾಗುತ್ತಿದ್ದು, ಮಾ.22 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 04 ಗಂಟೆಯವರೆಗೆ ಎಫ್-34, ಎಫ್-36, ಎಫ್-40, ಎಫ್-75, ಎಫ್-76  ಮತ್ತು ಎಫ್-39ನ ಫೀಡರ್‍ಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು: ವಿನಾಯಕ ನಗರ, ಕಂಟೋನ್‍ಮೆಂಟ್, ಐಶ್ವರ್ಯ ಕಾಲೋನಿ, ಐಟಿಐ ಕಾಲೇಜ್, ರೇಡಿಯೋ ಪಾರ್ಕ್, ಕೌಲ್‍ಬಜಾರ್ ಮುಖ್ಯ ರಸ್ತೆ, ಟೈಲರ್ ಬೀದಿ, ಕುವೆಂಪು ನಗರ, ಜಯನಗರ, ಚಂದ್ರ ಕಾಲೋನಿ, ರಾಮಾಂಜಿನೇಯ ನಗರ, ಸಿ.ಎಮ್.ಸಿ ಕಾಲೋನಿ, ಎಕ್ಸ್ ಸರ್ವಿಸ್‍ಮೆನ್ ಕಾಲೋನಿ, ಅರಣ್ಯ ಕ್ವಾಟರ್ಸ್, ಜಾಗೃತಿ ನಗರ, ಟ್ರಾಮಾ ಕೇರ್ ಸೆಂಟರ್, ಜಲ ಶುದ್ಧೀಕರಣ ಕೇಂದ್ರ ಹಾಗೂ ಮುಂತಾದ ಏರಿಯಾಗಳು ಮತ್ತು ಕೊಳಗಲ್ಲು ಗ್ರಾಮ ಹಾಗೂ ಸುತ್ತ-ಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!