
23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತ್ಯುತ್ಸವ
ಕರುನಾಡ ಬೆಳಗು ಸುದ್ದಿ
ವಿಜಯನಗರ, 19- ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ, ಹೊಸಪೇಟೆ ಇವರ ಸಂಯುಕ್ತಾಶ್ರಯದಲ್ಲಿ ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಕಾರ್ಯಕ್ರಮವನ್ನು ಅಕ್ಟೋಬರ್ ೨೩ ರಂದು ಬೆಳಗ್ಗೆ ೧೧ ಗಂಟೆಗೆ ಹೊಸಪೇಟೆಯ ಕೊಟ್ಟೂರುಸ್ವಾಮಿ ಮಠದಲ್ಲಿ ಹಮ್ಮಿಕೊಳ್ಳಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಗಳ ಉಸ್ತುವಾರಿ ಸಚಿವರಾದ ಬಿ.ಜೆಡ್. ಜಮೀರ್ ಅಹ್ಮದ್ ಖಾನ್ ಉದ್ಘಾಟಿಸುವರು. ವಿಜಯನಗರ ಶಾಸಕರಾದ ಹೆಚ್.ಆರ್. ಗವಿಯಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕಾರಾಂ ಹಾಗೂ ಡಾ.ಪ್ರಭಾ ಮಲ್ಲಿಕಾರ್ಜುನ, ಶಾಸಕಾರಾದ ಕೆ.ನೇಮಿರಾಜ ನಾಯ್ಕ, ಡಾ.ಎನ್.ಟಿ.ಶ್ರೀನಿವಾಸ್, ಎಲ್.ಕೃಷ್ಣನಾಯಕ, ಎಂ.ಪಿ.ಲತಾ ಮಲ್ಲಿಕಾರ್ಜುನ ಹಾಗೂ ಬಿ.ದೇವೇಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಬಿ.ಪಾಟೀಲ್, ಶಶೀಲ್ ಜಿ. ನಮೋಶಿ ಹಾಗೂ ವೈ.ಎಂ. ಸತೀಶ್, ಹೊಸಪೇಟೆ ನಗರಸಭೆ ಅಧ್ಯಕ್ಷರಾದ ರೂಪೇಶ್ ಕುಮಾರ ಎನ್., ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್.ಎಫ್ ಇಮಾಮ್ ನಿಯಾಜಿ, ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿಬಾಬು ಬಿ.ಎಲ್ ಉಪಸ್ಥಿತರಿರುವರು.
ವಿಜಯನಗರ ಮಹಾವಿದ್ಯಾಲಯದ ಇತಿಹಾಸ ಉಪನ್ಯಾಸಕರಾದ ಬಸವರಾಜ ಮೇಟಿ ಅವರು ವಿಶೇಷ ಉಪನ್ಯಾಸ ನೀಡುವರು.
ಕಿತ್ತೂರು ರಾಣಿ ಚೆನ್ನಮ್ಮ ಭಾವಚಿತ್ರದ ಮೆರವಣಿಗೆಯು ಬೆಳಿಗ್ಗೆ ೯ ಗಂಟೆಗೆ ಕಿತ್ತೂರು ರಾಣಿ ಚೆನ್ನಮ್ಮ ಪ್ರೌಢಶಾಲೆಯಿಂದ ಜಂಬುನಾಥ ರಸ್ತೆ, ಬಳ್ಳಾರಿ ರಸ್ತೆ ಮೂಲಕ, ವಡಕರಾಯ ದೇವಸ್ಥಾನ ವೃತ್ತದಿಂದ ಶ್ರೀ ಕೊಟ್ಟೂರುಸ್ವಾಮಿ ಮಠದವರೆಗೆ ವಿವಿಧ ಕಲಾತಂಡದವರಿAದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.