24ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 22- ಕೊಪ್ಪಳ ಜೆಸ್ಕಾಂ ವ್ಯಾಪ್ತಿಯ 110/33/11 ಕೆ.ವಿ. ಕೊಪ್ಪಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೆ ತ್ರೆöÊಮಾಸಿಕ ಕೆಲಸ ನಡೆಸುತ್ತಿರುವ ಪ್ರಯುಕ್ತ ಜೂನ್ 24ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
110/33/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ 33 ಕೆ.ವಿ. ಕಿನ್ನಾಳ ಮಾರ್ಗಗಳಿಗೆ ಹಾಗೂ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಕೊಪ್ಪಳ ನಗರ, ಭಾಗ್ಯನಗರ ಪ್ರದೇಶಗಳಿಗೆ ಜೂ.24ರಂದು ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕು.
ವಿದ್ಯುತ್ ದುರಸ್ತಿ ಕಾರ್ಯವು ಬೇಗನೆ ಮುಕ್ತಾಯವಾದಲ್ಲಿ ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ ಕಾರ್ಯಗಳನ್ನು ಮಾಡಬಾರದು. ಒಂದು ವೇಳೆ ವಿದ್ಯುತ್ ಅಪಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರಿಯಾಗುವುದಿಲ್ಲ ಎಂದು ಕೊಪ್ಪಳ ಜೆಸ್ಕಾಂ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
