
27 ರಂದು ವಿಶ್ವ ಕ್ಷಯರೋಗ ದಿನಾಚರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ,25- ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ವತಿಯಿಂದ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ 27 ರಂದು ಬೆಳಿಗ್ಗೆ 10 ಗಂಟೆಗೆ ನಗರದ ಸಾಹಿತ್ಯ ಭವನದಲ್ಲಿ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಸಾರ್ವಜನಿಕರು, ಆಸಕ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.