
ಕಟ್ಟಡ ಕಾರ್ಮಿಕರ ಮಕ್ಕಳಿಂದ ಪತ್ರ ಚಳುವಳಿ
ಕರುನಾಡ ಬೆಳಗು ಸುದ್ದಿ
ಹೊಸಪೇಟೆ, 26 – ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನ ನೀಡುವಂತೆ ಆಗ್ರಹಿಸಿ ವಿಜಯನಗರ ಜಿಲ್ಲೆಯಲ್ಲಿ ಕಾರ್ಮಿಕರು ಮಕ್ಕಳು ಚಳುವಳಿ ನಡೆಸಿದರು.
ಶೈಕ್ಷಣಿಕ ಸಹಾಯ ಧನಕ್ಕಾಗಿ ಅರ್ಜಿ ಸಲ್ಲಿಸಿದ ವಿಜಯನಗರ ಜಿಲ್ಲೆಯಲ್ಲಿ ಸುಮಾರು 4,000 ಕಾರ್ಮಿಕರ ಮಕ್ಕಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ವಿವಿಧ ಅಂಚೆ ಕಚೇರಿಗಳಲ್ಲಿ ಪೋಸ್ಟ್ ಮಾಡಿದರು.
ಈ ಸಂದರ್ಭದಲ್ಲಿ ಸಿ ಡಬ್ಲ್ಯೂ ಎಫ್ ಐ ಮುಖಂಡ ಎನ್. ಎಲ್ಲಾ ಲಿಂಗ ಮಾತನಾಡಿ ಕಳೆದು ಎರಡು ವರ್ಷಗಳಿಂದ ಕಟ್ಟಡ ಸಿಗಬೇಕಾಗಿರುವ ಶೈಕ್ಷಣಿಕ ಸಹಾಯ ಇನ್ನು ಬಿಡುಗಡೆಯಾಗಿಲ್ಲ. ಇದರಿಂದಾಗಿ ಕಟ್ಟಡ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗುವ ಪರಿಸ್ಥಿತಿ ಎದುರಾಗಿದೆ.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಪಡರೇಶನ್ ವಿಜಯನಗರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಜಿಲ್ಲೆಯ ನೂರಾರು ಮಕ್ಕಳಿಂದ ಪತ್ರ ಚಳುವಳಿ ಹಮ್ಮಿಕೊಂಡಿದೆ ಎಂದರು. ತಮ್ಮ ಪ್ರಾಣಗಳನ್ನು ಪಣವಾಗಿಟ್ಟು ದುಡಿಯುವ ಕಟ್ಟಡ ಕಾರ್ಮಿಕರಿಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಮತ್ತು ಉಸ್ತುವಾರಿ ಸಚಿವರಾದ ಜಮೀರ್ ಅಹಮದ್ ಅವರಿಗೆ ಸಮಸ್ಯೆಗಳ ಬಗ್ಗೆ ಮನವಿ ಸಲ್ಲಿಸಿದರು ಯಾವುದೇ ಪ್ರಯೋಜನ ಆಗಲಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟಡ ಕಾರ್ಮಿಕರ ಕುಟುಂಬಗಳ ಸಂಕಷ್ಟ ಪರಿಹಾರಕ್ಕಾಗಿ ಅವರ ಮಕ್ಕಳ ಮೂಲಕ ಅಂಚೆ ಕಾರ್ಡ್ ಚಳುವಳಿ ಹಮ್ಮಿಕೊಂಡಿದೆ ಎಂದು ಅವರು ತಿಳಿಸಿದರು.