285ನೇ ಸಂತ ಸೇವಾಲಾಲ್ ಮಹಾರಾಜರ ಜಯಂತಿ ಕಾರ್ಯಕ್ರಮ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ,15- ನಮ್ಮ ವೈವಿಧ್ಯಮಯ ಸಂಸ್ಕೃತಿ ಮತ್ತು ಪರಂಪರೆಯನ್ನು ಗೌರವಿಸುವುದು ಮತ್ತು ಕಾಪಾಡುವುದು ಪ್ರತಿಯೊಬ್ಬ ಭಾರತೀಯರ ಸಂವಿಧಾನ ಬದ್ಧ ಮೂಲಭೂತ ಕರ್ತವ್ಯ ಎಂದು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿಯ ಅಧ್ಯಕ್ಷರು ತಾಲೂಕ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ತಹಸಿಲ್ದಾರ್ ಶಂಶೇ ಆಲಂ ಅವರು ಹೇಳಿದರು.
ಕರ್ನಾಟಕ ಸರ್ಕಾರ ಕರ್ನಾಟಕ ತಾಂಡ ತಾಲೂಕ ಆಡಳಿತ ಸಮಾಜ ಕಲ್ಯಾಣ ಇಲಾಖೆ ಸಹ ಭಾಗಿತ್ವದಲ್ಲಿ ಸಂತ ಸೇವಾಲಾಲ್ ಮಹಾರಾಜರ 285ನೇ ಜಯಂತಿ ಕಾರ್ಯಕ್ರಮದಲ್ಲಿ ಸಂತ ಸೇವಾಲಾಲ್ ಅವರ ಭಾವಚಿತ್ರಕ್ಕೆ ಪುಷ್ಪ ಮಾಲೆ ಹೂ ಅರ್ಪಿಸಿ ಅವರು ಮಾತನಾಡುತ್ತಾ ಸಂತ ಸೇವಾಲಾಲ್ ಮಹಾರಾಜರ ಅವರ ಆದರ್ಶ ಗುಣ ತತ್ವಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿ ಪಾಲಿಸಬೇಕು ಎಂದು ಕರೆ ನೀಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ನಗರಸಭಾ ಮಾಜಿ ಅಧ್ಯಕ್ಷರಾದ ಎನ್ ಕರಿಬಸಪ್ಪ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಬಿ ರಾಜೇಶ್ವರಿ ದೈಹಿಕ ಶಿಕ್ಷಕರಾದ ಬಿ ಈರಣ್ಣ ಅವರು ಸೇವಾಲಾಲ್ ಕುರಿತು ಮಾತನಾಡಿದರು ಮುಖ್ಯ ಭಾಷಣಕಾರ ಮತ್ತು ಉಪನ್ಯಾಸಕರಾದ ವಕೀಲರು ವೆಂಕಟೇಶ ನಾಯಕ ಅವರು ಸಂತ ಸೇವಾಲಾಲ್ ಮಹಾರಾಜ ಅವರ ಜೀವನ ಚರಿತ್ರೆಯನ್ನು ಅವರ ಇತಿಹಾಸ ವಿವರಿಸಿ ಮಾತನಾಡುತ್ತಿದ್ದರು.
ತಾಲೂಕ ಆರೋಗ್ಯ ವೈದ್ಯಾಧಿಕಾರಿ ಡಾ ಬಿ ಈರಣ್ಣ ನಗರಸಭಾ ಸದಸ್ಯ ಹೆಚ್ ಗಣೇಶ್ ರಾಷ್ಟ್ರೀಯ ಸಾಕ್ಷರತಾ ಸಮಾಜ ಸುಧಾರಕ ಎ ಅಬ್ದುಲ್ ನಬಿ ಭೋವಿ ಸಮಾಜದ ಮುಖಂಡ ಗಾಳೆಪ್ಪ ತಾಲೂಕ ಲಮಾಣಿ ಬಂಜಾರ ಕೆ ತಾಂಡ ಸಂತ ಸೇವಾಲಾಲ್ ಮಹಾರಾಜರ ಸಮಾಜದ ಅಧ್ಯಕ್ಷರು ಪದಾಧಿಕಾರಿಗಳು ಗಣ್ಯರು ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಭಾಷಣಕಾರರಿಗೆ ತಹಸೀಲ್ದಾರರಿಗೆ ಗಣ್ಯರಿಗೆ ಗೌರವಿಸಿ ಸನ್ಮಾನಿಸಲಾಯಿತು.
