
3 ರಂದು ಗಂಗಾವತಿ ತಾಲ್ಲೂಕು ಪಂಚಾಯತಿಯಲ್ಲಿ ಕೆಡಿಪಿ ಸಭೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 29- ಕೊಪ್ಪಳ ತಾಲ್ಲೂಕಿನ ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಜುಲೈ 03ರಂದು ಬೆಳಿಗ್ಗೆ 10.30 ಗಂಟೆಗೆ ಗಂಗಾವತಿ ತಾಲ್ಲೂಕು ಪಂಚಾಯತ್ ಮಂಥನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಗಾಲಿ ಜನಾರ್ಧನ ರೆಡ್ಡಿ ಅವರು ವಹಿಸಿಕೊಳ್ಳುವರು. ಆದ್ದರಿಂದ ಕೊಪ್ಪಳ ತಾಲ್ಲೂಕು ಮಟ್ಟದ ಎಲ್ಲಾ ಅನುಷ್ಠಾನಾಧಿಕಾರಿಗಳು ಗಂಗಾವತಿ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದ ಜೂನ್ 2024ರ ಮಾಹೆಯ ಅಂತ್ಯದವರೆಗೆ ಸಾಧಿಸಿದ ಪ್ರಗತಿ ವರದಿಯೊಂದಿಗೆ, ಪ್ರತಿನಿಧಿಗಳನ್ನು ಕಳುಹಿಸದೇ ಕಚೇರಿ ಮುಖ್ಯಸ್ಥರು ಖುದ್ದಾಗಿ ಸಭೆಗೆ ಹಾಜರಾಗಬೇಕು ಎಂದು ಕೊಪ್ಪಳ ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.