2c136fae-be38-4577-97e1-318669006cc9

30 ದಿನಗಳ ಕೌಶಲ್ಯಾಧಾರಿತ ತರಬೇತಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 22- ಸ್ವಯಂ ಉದ್ಯೋಗ ಪ್ರಾರಂಭಿಸುವ ಆಸಕ್ತರುಗಳಿಗಾಗಿ ಹೊಸಪೇಟೆನಲ್ಲಿ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್‌ವರ್ಕಿಂಗ್ ಬಗ್ಗೆ 30 ದಿನಗಳ ಕೌಶಲ್ಯಾಧಾರಿತ ತರಬೇತಿಯನ್ನು ಜುಲೈ 2024 ಎರಡನೇ ವಾರದಿಂದ ಹಮ್ಮಿಕೊಳ್ಳಲಾಗುವುದು.

ಜಿಲ್ಲೆಯ ಯಾವುದೇ ತಾಲೂಕಿನ ಅಭ್ಯರ್ಥಿಗಳು ಈ ತರಬೇತಿಯಲ್ಲಿ ಭಾಗವಹಿಸಬಹುದಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ, ಕಲಬುರಗಿ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್), ವಿಜಯನಗರ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗುವದು.

ಸದರಿ ಕಾರ್ಯಕ್ರಮದಲ್ಲಿ ಆಯಾ ವೃತ್ತಿಗಳಲ್ಲಿ ಕೌಶಲ್ಯದ ಪ್ರಾಯೋಗಿಕ ಹಾಗೂ ಸಿದ್ಧಾಂತದೊ0ದಿಗೆ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳು, ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕ ಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವದು ಮತ್ತು ಸಂಬ0ಧಪಟ್ಟ ಇತ್ಯಾದಿ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ, ಮಾಹಿತಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿ ಪೂರ್ಣಗೊಳಿಸಿದವರಿಗೆ ಪ್ರಮಾಣ ಪತ್ರ ನೀಡಲಾಗುವುದು. ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಅರ್ಹರಿಗೆ ಸರ್ಕಾರಿ ಯೋಜನೆ ಅಡಿಯಲ್ಲಿ ಬ್ಯಾಂಕ್ ಸಾಲ ಸೌಲಭ್ಯಕ್ಕಾಗಿ ಶಿಫಾರಸ್ಸು ಮಾಡಲಾಗುವದು.

ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಸಕ್ತರಿರುವ 18 ರಿಂದ 40 ವರ್ಷದೊಳಗಿನ, ಕನಿಷ್ಠ ಎಸ್.ಎಸ್.ಎಲ್.ಸಿ ಪಾಸ್ ಆದ ಎಲ್ಲಾ ವರ್ಗದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಜೂನ್ 29 ರೊಳಗಾಗಿ ಮೋ.ಸಂ: 6362681190, 7204016012, 9986332736 ಇಲ್ಲಿಗೆ ಕರೆ ಮಾಡಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳ್ಳಬಹ್ಮದಾಗಿದೆ. 30 ಅಭ್ಯರ್ಥಿಗಳ ತಂಡದಲ್ಲಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ಶೇ.35 ರಷ್ಟು ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಶೇ.15 ರಷ್ಟು ಆಧ್ಯತೆ ನೀಡಲಾಗುವದು ಎಂದು ಸಿಡಾಕ್‌ನ ಜಂಟಿ ನಿರ್ದೇಶಕರಾದ ಶ್ರೀ ಜಿ. ಯು. ಹುಡೇದ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!