KB

ಮತದಾನದ ೪೮ ಗಂಟೆ ಮುನ್ನ ಚುನಾವಣಾ ಚರ್ಚೆ, ಸಂವಾದ, ಸಮೀಕ್ಷೆಗಳಿಗೆ ನಿರ್ಬಂಧ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 8- ಸಂಡೂರು ವಿಧಾನಸಭೆ ಉಪಚುನಾವಣೆಗೆ ನ.೧೩ ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ನ. ೧೧ ರ ಸಂಜೆ ೦೬ ಗಂಟೆಗೆ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಮತದಾನ ಮುಕ್ತಾಯ ಸಮಯದ ಪೂರ್ವ ೪೮ ಗಂಟೆ ಅವಧಿಯಲ್ಲಿ ಅಂದರೆ, ನ.೧೧ ರ ಸಂಜೆ ೦೬ ಗಂಟೆಯಿAದ ನ.೧೩ ಸಂಜೆ ೦೬.೩೦ ಗಂಟೆಯವರೆಗೆ ಚುನಾವಣೆಗೆ ಸಂಬAಧಿಸಿದAತೆ ಮತದಾರರ ಮೇಲೆ ಪ್ರಭಾವ ಬೀರುವ ರೀತಿ, ಮಾಧ್ಯಮಗಳು, ಟಿ.ವಿ. ವಾಹಿನಿಗಳಲ್ಲಿ ಸಿನಿಮಾಟೋಗ್ರಾಫಿ, ಚರ್ಚೆ, ಸಂವಾದ, ಸಂದರ್ಶನ, ವಿಶ್ಲೇಷಣೆ, ಚುನಾವಣೋತ್ತರ ಸಮೀಕ್ಷೆ, ಹೀಗೆ ಯಾವುದೇ ಜಾಹೀರಾತು ಹಾಗೂ ಸುದ್ದಿಯನ್ನು ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ., ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮಗಳಲ್ಲಿ ಪ್ರಸಾರ ಮಾಡುವುದಾಗಲಿ ಅಥವಾ ಬಿತ್ತರಿಸುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

ಒಂದು ವೇಳೆ ನಿಯಮ ಉಲ್ಲಂಘಿಸಿ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವ ಸುದ್ದಿ ಬಿತ್ತರಿಸಿದಲ್ಲಿ ಅಂತಹವರ ವಿರುದ್ಧ ಪ್ರಜಾ ಪ್ರಾತಿನಿಧ್ಯ ಕಾಯ್ದೆ-೧೯೫೧ರ ಕಲಂ ೧೨೬ರ ಅನ್ವಯ ೨ ವರ್ಷಗಳ ಶಿಕ್ಷೆ ಅಥವಾ ದಂಡ, ಇಲ್ಲವೆ ಶಿಕ್ಷೆ ಮತ್ತು ದಂಡ ಎರಡನ್ನೂ ವಿಧಿಸಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಮತದಾನ ಪೂರ್ವ ೪೮ ಗಂಟೆ ಅವಧಿಯಲ್ಲಿ ಮಾಧ್ಯಮಗಳು, ವಿದ್ಯುನ್ಮಾನ ವಾಹಿನಿ, ಕೇಬಲ್ ಟಿ.ವಿ, ರೇಡಿಯೋ, ಸಾಮಾಜಿಕ ಜಾಲತಾಣ ಹಾಗೂ ಡಿಜಿಟಲ್ ಮಾಧ್ಯಮ ಸಂಸ್ಥೆಗಳು ಬಿತ್ತರಿಸುವ ಚುನಾವಣಾ ಸುದ್ದಿಯಲ್ಲಿ ಯಾವುದೇ ಅಭ್ಯರ್ಥಿ ಅಥವಾ ರಾಜಕೀಯ ಪಕ್ಷದ ಪರವಾಗಿರುವ ಮತ್ತು ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುವಂತಹ ಪ್ಯಾನಲಿಸ್ಟ್ ಅಭಿಪ್ರಾಯಗಳು, ಮನವಿಗಳು ಇಲ್ಲದಿರುವುದುನ್ನು ಖಚಿತಪಡಿಸಿಕೊಳ್ಳಬೇಕು. ಇದಲ್ಲದೆ ಯಾವುದೇ ಅಭಿಪ್ರಾಯ ಸಂಗ್ರಹದ ಫಲಿತಾಂಶ ಪ್ರಕಟ, ವಿಶ್ಲೇಷಣೆ, ಪ್ರದರ್ಶನ ಮಾಡುವುದನ್ನು ಸಹ ನಿರ್ಬಂಧಿಸಲಾಗಿದೆ.

ಎಕ್ಸಿಟ್ ಪೋಲ್ ನಿಷೇಧ : ಮತದಾನದ ಪೂರ್ವ ೪೮ ಗಂಟೆ ಮತ್ತು ಮತದಾನದ ಸಮಯ ಮುಗಿದ ನಂತರದ ಅರ್ಧ ಗಂಟೆವರೆಗೂ ಯಾವುದೇ ಸುದ್ದಿ ವಾಹಿನಿ, ಕೇಬಲ್ ಟಿ.ವಿ. ಸೇರಿದಂತೆ ಇನ್ನಿತರ ಡಿಜಿಟಲ್ ಮಾಧ್ಯಮಗಳು ಎಕ್ಸಿಟ್ ಪೋಲ್ ಪ್ರಸಾರ ಮಾಡುವುದನ್ನು ನಿಷೇಧಿಸಲಾಗಿದೆ. ಹೀಗಾಗಿ ಎಲ್ಲಾ ಮಾಧ್ಯಮ ಸಂಸ್ಥೆಗಳು ಚುನಾವಣಾ ಆಯೋಗವು ಕಾಲ ಕಾಲಕ್ಕೆ ಹೊರಡಿಸುವ ಎಲ್ಲಾ ಮಾರ್ಗದರ್ಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!