6ನೇ ತರಗತಿ ಪ್ರವೇಶಕ್ಕೆ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 17- 2024-25ನೇ ಸಾಲಿಗೆ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು 5ನೇ ತರಗತಿಯಲ್ಲಿ ಶೇ.60ರಷ್ಟು ಅಂಕ ಪಡೆದು ಉತ್ತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ರೂ.ಗಳ ಒಳಗಿರಬೇಕು.
ಅರ್ಜಿಗಳನ್ನು ಮೇ 9 ರಿಂದ ಮೇ 21ರವರೆಗೆ ಸಂಬಂಧಿಸಿದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯ ಹೊಸಪೇಟೆ, ಕೂಡ್ಲಿಗಿ, ಹರಪನಹಳ್ಳಿ ಮತ್ತು ಸಹಾಯಕ ನಿರ್ದೇಶಕರ ಕಾರ್ಯಾಲಯ ಸಮಾಜ ಕಲ್ಯಾಣ ಇಲಾಖೆ, ಹೂವಿನಹಡಗಲಿ, ಹಗರಿಬೊಮ್ಮನಹಳ್ಳಿ ಹಾಗೂ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಜಿಲ್ಲಾ ಮತ್ತು ತಾಲೂಕು ಕಚೇರಿಗಳಲ್ಲಿ ಪಡೆಯಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 21 ಆಗಿದೆ. ಡಯಟ್ ಮೂಲಕ ಪ್ರವೇಶ ಪರೀಕ್ಷೆಯನ್ನು ಮೇ 28ರಂದು ನಡೆಸಲಾಗುವುದು. ಮೇ 31ರಂದು ಪ್ರವೇಶ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುವುದು. ಭರ್ತಿ ಮಾಡಿದ ಅರ್ಜಿಗಳನ್ನು ಕಚೇರಿ ವೇಳೆಯಲ್ಲಿ ಸಲ್ಲಿಸಬಹುದಾಗಿದೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಮತ್ತು ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ತಾಲೂಕುವಾರು ಸಂಪರ್ಕ ಸಂಖ್ಯೆ ನೀಡಲಾಗಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕೂಡ್ಲಿಗಿ ತಾಲೂಕು ಕಚೇರಿ ಮೊ-7022223200., ಹರಪನಹಳ್ಳಿ ತಾಲೂಕು ಕಚೇರಿ ಮೊ-9483640733., ಹಡಗಲಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಮೊ:9901980762, ಹಗರಿಬೊಮ್ಮನಹಳ್ಳಿಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಮೊ:9972078762 ಇವರಿಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
