6-8 ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದ
ನೇಮಕಾತಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ನವೆಂಬರ್ 4ಕ್ಕೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 02- 6-8ನೇ ತರಗತಿಯ ಪದವೀಧರ ಪ್ರಾಥಮಿಕ ಶಿಕ್ಷಕ ವೃಂದದ (6 ರಿಂದ 8ನೇ ತರಗತಿ) ನೇಮಕಾತಿಗೆ ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಕೌನ್ಸಲಿಂಗ್ ಪ್ರಕ್ರಿಯೆ ಕೈಗೊಳ್ಳಲು ತಿಳಿಸಿರುವ ಪ್ರಯುಕ್ತ ಕೊಪ್ಪಳ ಜಿಲ್ಲೆಯ ಕೌನ್ಸಿಲಿಂಗ್ನ್ನು ನವೆಂಬರ್ 04 ಬೆಳಿಗ್ಗೆ 10 ಗಂಟೆಗೆ ಉಪನಿರ್ದೇಶಕರು(ಆಡಳಿತ) ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಆದಕಾರಣ ನೇಮಕಾತಿಗೆ ಅರ್ಹತೆ ಪಡೆದಿರುವ ಅಭ್ಯರ್ಥಿಗಳು ಕೌನ್ಸಲಿಂಗ್ನಲ್ಲಿ ಅಗತ್ಯ ದಾಖಲೆಯ ಭಾವಚಿತ್ರ ಇರುವ ಗುರುತಿನ ಪತ್ರ ಹಾಗೂ 3 ಪಾಸ್ಪೋರ್ಟ ಪೋಟೋದೊಂದಿಗೆ ಅಂದು ಬೆಳಿಗ್ಗೆ 8.30 ಗಂಟೆಗೆ ಹಾಜರಿರಲು, ಭಾಗವಹಿಸಲು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಎಸ್.ಎಸ್.ಬಿರಾದಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.