ಅಮೃತ ಸರೋವರ ದಡದಲ್ಲಿ ಸಂಭ್ರಮದ 78ನೇ ಸ್ವಾತಂತ್ರ್ಯ ದಿನಾಚರಣೆ
ಕರುನಾಡ ಬೆ?ಳಗು ಸುದ್ದಿ
ಯಲಬುರ್ಗಾ, 16- 15 ಸ್ವಾತಂತ್ರ್ಯ ಗೋಸ್ಕರ ಹೋರಾಡಿದ ಎಲ್ಲಾ ಮಹಾತ್ಮರನ್ನು ಈ ಸಂದರ್ಭದಲ್ಲಿ ನೆನಪಿಸಿಕೊಳ್ಳುವ ಮೂಲಕ ಪ್ರತಿಯೂಬ್ಬರು ತಮ್ಮ ಗ್ರಾಮ ವನ್ನು ಸ್ವಚ್ಛತೆಯಾಗಿ ಇಟ್ಟುಕೊಳ್ಳುಬೇಕು ನೀರಿನ ಸಂರಕ್ಷಣೆ ಮಾಡಬೇಕು ಎಂದು ತಾ, ಪಂ.ಇ ಓ ಸಂತೋಷ ಪಾಟೀಲ್ ಹೇಳಿದರು.
ತಾಲೂಕಿನ ಸಂಗನಹಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಅಮೃತ ಸರೋವರ ದಡದ ಮೇಲೆ 78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಗ್ರಾಮದ ಮಾಜಿ ಯೋಧರಿಂದ ರಾಷ್ಟ್ರ ಧ್ವಜ ಆರೋಹಣ ಮಾಡುವ ಮೂಲಕ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೊಂಡು ಸಸಿ ನೆಟ್ಟು ಮಾತನಾಡಿದ ಅವರು, ಭಾರತ ಹಳ್ಳಿಗಳ ದೇಶ. ಹಳ್ಳಿಗಳಲ್ಲಿನ ಕೆರೆ, ಕಟ್ಟೆಗಳು ಮಳೆನೀರಿನಿಂದ ಭರ್ತಿಯಾದರೆ ಮಾತ್ರ ಅಂತರ್ಜಲ ಮಟ್ಟ ಹೆಚ್ಚಳವಾಗಲು ಸಾಧ್ಯ. ಸರ್ಕಾರ ಈ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನ ಮಾಡಲಾಗುತ್ತಿದೆ. ತಾಲೂಕಿನಲ್ಲಿರುವ ಕೆರೆಗಳನ್ನು ತುಂಬಿಸಿ ರೈತರಿಗೆ ಕುಡಿಯುವ ನೀರಿನ ಕೊರತೆಯಾಗದಂತೆ ನೋಡಿಕೊಳ್ಳಲು ಯೋಜನೆ ರೂಪಿಸಿದೆ. ಶೀಘ್ರದಲ್ಲೆ ಕೆರೆಗಳನ್ನು ತುಂಬಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದರು.
ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಮಹನೀಯರನ್ನು ಸ್ಮರಿಸುವುದು ಹಾಗೂ ಅವರ ತತ್ವಾದರ್ಶಗಳನ್ನು ಅಳವಡಿಸಿಕೊಳ್ಳುವುದು ಅವಶ್ಯವಾಗಿದೆ ಎಂದರು.
ಈ ಸಂದರ್ಭದಲ್ಲಿ ಅಮೃತ ಸರೋವರ ಸುತ್ತಮುತ್ತ ಸಸಿಗಳನ್ನು ನೆಡಲಾಯಿತು. ಈ ವೇಳೆ ತಾಪಂ ಸಹಾಯಕ ನಿರ್ದೇಶಕರು, ಗ್ರಾಪಂ ಅದ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು, ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು, ಸಿಬ್ಬಂದಿಗಳು ತಾಲೂಕು ಐಇಸಿ ಸಂಯೋಜಕರಾದ ಶರಣಪ್ಪ ಹಾಳಕೇರಿ ಮತ್ತು ಇತರರು ಭಾಗವಹಿಸಿದ್ದರು.
