ಕೊಪ್ಪಳ ವಿಶ್ವವಿದ್ಯಾಲಯ : ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 14- ಕೊಪ್ಪಳ ವಿಶ್ವವಿದ್ಯಾಲಯದಲ್ಲಿ ಎಪ್ರಿಲ್ 14 ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ 133 ನೇ ಜಯಂತಿಯನ್ನು ಆಚರಿಸಲಾಯಿತು.
ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ ರವಿ ಅವರು ಡಾ.ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಕುಲಸಚಿವರಾದ ಪ್ರೊ.ಕೆ.ವಿ ಪ್ರಸಾದ್, ನಿರ್ದೇಶಕರಾದ ಪ್ರೊ. ಚನ್ನಬಸವಪ್ಪ ಚಲವಾದಿ, ಯಲಬುರ್ಗಾ ಸ್ನಾತಕೋತ್ತರ ಕೇಂದ್ರದ ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸೂರ್ಯಕಾಂತ ಸಾದು, ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಬಸವರಾಜ ಈಳಿಗನೂರ ಸೇರಿದಂತೆ ಇತರೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು
