WhatsApp Image 2024-04-30 at 3.51.38 PM

ಅಸುಂಡಿ ಗ್ರಾಮದಲ್ಲಿ ಮತದಾನ ಜಾಗೃತಿ

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 30- ದೇಶದ ಪ್ರಗತಿಗಾಗಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಬಳ್ಳಾರಿ ತಾಲ್ಲೂಕು ಸ್ವೀಪ್ ನೋಡೆಲ್ ಅಧಿಕಾರಿ ಹಾಗೂ ತಾಪಂ ಇಒ ಮಡಗಿನ ಬಸಪ್ಪ ಅವರು ಹೇಳಿದರು.

ಇಂದು, ಬಳ್ಳಾರಿ ತಾಲ್ಲೂಕಿನ ಅಮರಾಪುರ ಗ್ರಾಮ ಪಂಚಾಯತಿಯ ಅಸುಂಡಿ ಗ್ರಾಮದಲ್ಲಿ  ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿ ಸ್ಥಳದಲ್ಲಿ ಹಮ್ಮಿಕೊಂಡಿದ್ದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮೇ 07 ರಂದು ತಪ್ಪದೇ ಮತದಾನ ಮಾಡಬೇಕು. ದೇಶದ ಉನ್ನತಿಗಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಗ್ರಾಮೀಣ ಉದ್ಯೋಗ ಸಹಾಯಕ ನಿರ್ದೇಶಕ ಆರ್.ಕೆ.ಬಸವರಾಜ, ಅಮರಾಪುರ ಗ್ರಾಮ ಪಂಚಾಯಿತಿ ಪಿಡಿಓ ಹುಸೇನ್ ಸೇರಿದಂತೆ ಸ್ವ ಸಹಾಯ ಸಂಘದ ಸದಸ್ಯರು, ಆಶಾ ಕಾರ್ಯಕರ್ತೆಯರು, ಕೂಲಿಕಾರ್ಮಿಕರು ಮತ್ತು ಗ್ರಾಪಂ ಸಿಬ್ಬಂದಿಯವರು ಹಾಜರಿದ್ದರು.

Leave a Reply

Your email address will not be published. Required fields are marked *

error: Content is protected !!