WhatsApp Image 2024-05-09 at 10.12.14 AM

ಸಾರ್ವಜನಿಕ ಸೇವೆಗಳಿಗೆ ಮಧ್ಯವರ್ತಿಗಳನ್ನು ಸಂಪರ್ಕಿಸದೆ ಯೋಜನಾ ನಿರ್ದೇಶಕರನ್ನು ಸಂಪರ್ಕಿಸಿ : ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ

ಕರುನಾಡ ಬೆಳಗು ಸುದ್ದಿ

ವಿಜಯನಗರ, 9- ನಗರಸಭೆಗೆ ಸಂಬಂಧಿಸಿದಂತೆ ಖಾತಾ ಬದಲಾವಣೆ, ನಮೂನೆ-3, ಕಟ್ಟಡ ಪರವಾನಿಗೆ, ಉದ್ದಿಮೆ ಪರವಾನಿಗೆ ಹಾಗೂ ಇನ್ನಿತರೆ ಸಾರ್ವಜನಿಕರ ಸೇವೆಗಳನ್ನು ಮಧ್ಯವರ್ತಿಗಳ ಹಾವಳಿಯಿಂದಾಗಿ ವಿಳಂಬವಾಗಿ ಸಾರ್ವಜನಿಕರಿಗೆ ತಲುಪಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿಬಂದಿರುತ್ತದೆ. ಹಾಗಾಗಿ ಸಮಸ್ಯೆಯನ್ನು ಪರಿಹರಿಸಿ, ಸಾರ್ವಜನಿಕರಿಗೆ ಸುಗಮ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಪ್ರತಿ ಸೋಮುವಾರ ನಗರಸಭೆಯ ಕಾರ್ಯಾಲಯದಲ್ಲಿ ಜಿಲ್ಲಾನಗರಾಭಿವೃದ್ದಿ ಕೋಶ ಕಛೇರಿಯ ಯೋಜನಾ ನಿರ್ದೇಶಕರು ರವರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಲಾಗಿರುತ್ತದೆ.

ಹಾಗಾಗಿ ಹೊಸಪೇಟೆ ನಗರದ ಸಾರ್ವಜನಿಕರು ಮಧ್ಯವರ್ತಿಗಳನ್ನು ಸಂಪರ್ಕಿಸದೆ ಯೋಜನಾ ನಿರ್ದೇಶಕರು ಜಿಲ್ಲಾನಗರಾಭಿವೃದ್ದಿ ಕೋಶ, ವಿಜಯನಗರ ಜಿಲ್ಲೆ ರವರ ಉಪಸ್ಥಿತಿಯಲ್ಲಿ ಮೇಲೆ ವಿವರಿಸಿರುವ ಹಾಗೂ ಇತರೆ ಸಮಸ್ಯೆಗಳ ಕುರಿತು ಸಂಪರ್ಕಿಸಿ, ಸದುಪಯೋಗ ಪಡೆದುಕೊಳ್ಳಲು ಸಾರ್ವಜನಿಕ ಪ್ರಕಟಣೆಯಲ್ಲಿ ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ ಸಾರ್ವಜನಿಕರಲ್ಲಿ ಕೋರಿದ್ದಾರೆ.

Leave a Reply

Your email address will not be published. Required fields are marked *

error: Content is protected !!