ರೈತರು ಅಧಿಕೃತ ಮಾರಾಟಗಾರರಿಂದ ಬಿತ್ತನೆ ಬೀಜ ಖರೀದಿಸಿ
ಕರುನಾಡ ಬೆಳಗು ಸುದ್ದಿ
ಸಿರುಗುಪ್ಪ, 19- ಬಳ್ಳಾರಿ ಜಿಲ್ಲೆಯ ರೈತರು ಬಿತ್ತನೆ ಬೀಜಗಳನ್ನು ಅಧಿಕೃತ ಮಾರಾಟಗಾರರಿಂದ ಮಾತ್ರ ಖರೀದಿಸಬೇಕು ಮತ್ತು ಅಧಿಕೃತ ಬಿಲ್ಲು ಪಡೆದುಕೊಳ್ಳಬೇಕು ಯಾರಾದರೂ ಲೂಸ್ ಪ್ಯಾಕೆಟ್ಗಳಲ್ಲಿ ಬಿತ್ತನೆ ಬೀಜಗಳನ್ನು ಮಾರಾಟ ಮಾಡಿದ್ದಲ್ಲಿ ಅಂತಹ ಬಿತ್ತನೆ ಬೀಜಗಳನ್ನು ಖರೀದಿಸಬಾರದು ಬಳ್ಳಾರಿ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರಾದ ಎಂ ತಿರುಮಲೇಶ್ ಪ್ರಕಟಿಸಿದ್ದಾರೆ.
ಪ್ರಸಕ್ತ ಸಾಲಿನಲ್ಲಿ ಉತ್ತಮ ಮಳೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಬಳ್ಳಾರಿ ಜಿಲ್ಲೆಯಲ್ಲಿ ಸರಿಯಾದ ಸಮಯಕ್ಕೆ ಬಿತ್ತನೆ ಕಾರ್ಯ ಪ್ರಾರಂಭವಾಗುವ ಅವಕಾಶವಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಎಮ್ ತಿರುಮಲೇಶ್ ಅವರು ಪ್ರಕಟಿಸಿದ್ದಾರೆ.
