ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ವಿಜಯನಗರ, 23- ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ಮಾಲವಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತೋಟಗಾರಿಕೆ ಇಲಾಖೆಯು ಜೂನ್ 15ರಿಂದ ಮಾರ್ಚ್ 31ರವರೆಗೆ 10 ತಿಂಗಳ ನಡೆಸುವ ತೋಟಗಾರಿಕೆ ತರಬೇತಿಗಾಗಿ ವಿಜಯನಗರ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಂದ ತೋಟಗಾರಿಕಾ ಇಲಾಖೆಯು ಅರ್ಜಿ ಆಹ್ವಾನಿಸಿದೆ.
ವಿಜಯನಗರ ಜಿಲ್ಲೆಯ ರೈತ ಮಕ್ಕಳ ಪುರುಷ ಮತ್ತು ಮಹಿಳೆ ಅಭ್ಯರ್ಥಿಗಳು ಅರ್ಜಿಯನ್ನು (ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹೊರತುಪಡಿಸಿ) ಜೂನ್ 3ರೊಳಗೆ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಟ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿಬೇಕು, ಅಭ್ಯರ್ಥಿಯ ತಂದೆ, ತಾಯಿ ಅಥವಾ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರುಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ವಿಕಲಚೇತನರಿಗೆ ಕನಿಷ್ಟ 18 ವರ್ಷ ಮತ್ತು ಗರಿಷ್ಟ 33 ವರ್ಷ ಮಾಜಿ ಸೈನಿಕರಿಗೆ 33 ರಿಂದ ಗರಿಷ್ಟ 65 ವರ್ಷ ಹಾಗೂ ಸಾಮಾನ್ಯ ವರ್ಗದವರಿಗೆ ಕನಿಷ್ಟ 18 ವರ್ಷ ಗರಿಷ್ಟ 30 ವರ್ಷ ವಯೋಮಿತಿ ಹೊಂದಿರಬೇಕು.
ಸಾಮಾನ್ಯ ಅಭ್ಯರ್ಥಿಗಳು 30 ರೂ., ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರೂ.ಗಳ ಪೋಷ್ಟಲ್ ಆರ್ಡರ್ ಅಥವಾ ಡಿಮ್ಯಾಂಡ್ ಡ್ರಾಪ್ಟ್ ಅನ್ನು ವಿಜಯನಗರದ ತೋಟಗಾರಿಕೆ ಉಪನಿರ್ದೇಶಕರ ಹೆಸರಿನಲ್ಲಿ ಪಡೆದು ಅರ್ಜಿ ಜೊತೆಗೆ ಲಗತ್ತಿಸಿ ಸಲ್ಲಿಸಬೇಕು. ಅರ್ಜಿಗಳನ್ನು ತೋಟಗಾರಿಕೆ ಇಲಾಖೆಯ ಕಚೇರಿಗಳಲ್ಲಿ ಅಥವಾ ಇಲಾಖಾ ವೆಬ್ ಸೈಟ್ hಣಣಠಿ://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.i ಟಿ ಮೂಲಕ ಪಡೆದು ಭರ್ತಿ ಮಾಡಿ ಅರ್ಜಿಗಳನ್ನು ಆಯಾ ತೋಟಗಾರಿಕೆ ಉಪನಿರ್ದೇಶಕರು, ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ವಿಜಯನಗರ ಹೊಸಪೇಟೆ ಕಚೇರಿಗೆ ಸಲ್ಲಿಸಬಹುದು.
ಜೂನ್ 6ರಂದು ಬೆಳಿಗ್ಗೆ 11 ಗಂಟೆಗೆ ವಿಜಯನಗರದ ತೋಟಗಾರಿಕೆ ಉಪನಿರ್ದೇಶಕರು (ಜಿ.ಪಂ) ಹೊಸಪೇಟೆ ಕಚೇರಿಯಲ್ಲಿ ಸಂದರ್ಶನ ಇದ್ದು, ಸಂದರ್ಶನಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಹಾಜರಾಗಬೇಕು. ಇದಕ್ಕಾಗಿ ಪ್ರತ್ಯೇಕ ಸಂದರ್ಶನ ಪತ್ರವನ್ನು ಕಳುಹಿಸಲಾಗುವುದಿಲ್ಲ ಎಂದು ತೋಟಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ.
