ಸರ್ಕಾರಿ ಕಟ್ಟಡಕ್ಕೆ ಆದ ಹಾನಿಯನ್ನು ಸಂಬAಧಿಸಿದ ಇಲಾಖೆಯೇ ಭರಿಸಬೇಕು : ಡಿಸಿ ನಲಿನ್ ಅತುಲ್
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 24- ರೈಲ್ವೇ ಕಾಮಗಾರಿ ಅಥವಾ ರಾಷ್ಟಿçÃಯ ಹೆದ್ದಾರಿ ಕಾಮಗಾರಿಗಳ ಸಂದರ್ಭದಲ್ಲಿ ಹಾನಿಗೊಳಗಾಗದ ಸರ್ಕಾರಿ ಕಟ್ಟಡಗಳನ್ನು ಆಯಾ ಇಲಾಖೆಯಿಂದಲೇ ಮರು ನಿರ್ಮಿಸಿ ಕೊಡಬೇಕು ಹಾಗೂ ಸಂಪೂರ್ಣ ಹಾನಿ ವೆಚ್ಚ ಭರಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಲ್ಲಿ ಜಮೀನು/ ನಿವೇಶನಗಳ ಅವಶ್ಯಕತೆ ಮತ್ತು ಸಮಸ್ಯೆಗಳ ಕುರಿತು ಶುಕ್ರವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಅಂತರ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗದಗ-ವಾಡಿ ರೈಲ್ವೇ ಮಾರ್ಗ ನಿರ್ಮಾಣ ವೇಳೆಯಲ್ಲಿ ಕುಷ್ಟಗಿ ಪಟ್ಟಣದ ಶಾಲೆಯೊಂದಕ್ಕೆ ಹಾನಿಯಾಗಿದ್ದು, ಹಾನಿಯಾದ ವೆಚ್ಚವನ್ನು ಭರಿಸುವ ಬದಲಾಗಿ ನಮಗೆ ಹೊಸ ಕಟ್ಟಡವನ್ನು ನಿರ್ಮಿಸಿಕೊಡಿ. ಇದರಂತೆ ಇನ್ನು ಮುಂದೆಯೂ ಯಾವುದೇ ಸರ್ಕಾರಿ ಕಟ್ಟಡಕ್ಕೆ ಕಾಮಗಾರಿ ಸಂದರ್ಭದಲ್ಲಿ ಹಾನಿಯಾದಲ್ಲಿ ರೈಲ್ವೇ ಇಲಾಖೆಯೇ ಕಟ್ಟಡ ಮರು ನಿರ್ಮಿಸಿಕೊಡಬೇಕು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಸೂಚನೆಯನ್ನು ರೈಲ್ವೇ ಇಲಾಖೆ ಅಧಿಕಾರಿಗಳಿಗೆ ನೀಡಿದರು.
ಜಿಲ್ಲೆಯ ಕೊಪ್ಪಳ ಮತ್ತು ಕುಷ್ಟಗಿ ತಾಲ್ಲೂಕುಗಳಲ್ಲಿ ಶಾಶ್ವತ ಹೆಲಿಪ್ಯಾಡ್ ನಿರ್ಮಾಣಕ್ಕೆ ಜಮೀನು ಗುರುತಿಸಿ ವರದಿ ತಯಾರಿಸಲು ಆಯಾ ತಹಶೀಲ್ದಾರರು ಕೂಡಲೇ ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಪ್ರಾದೇಶಿಕ ಕೇಂದ್ರ ಸ್ಥಾಪಿಸಲು ಜಮೀನು ಗುರುತಿಸಬೇಕು. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಬರುವ ವಸತಿ ಶಾಲೆ, ವಸತಿ ನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಟ್ಟಡ ನಿರ್ಮಾಣಕ್ಕಾಗಿ ಆಯಾ ಇಲಾಖೆಗಳಿಂದ ಬರುವ ಪ್ರಸ್ತಾವನೆಗಳನ್ನು ಪರಿಶೀಲಿಸಿ ಜಮೀನು, ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಷ್ಟಿçÃಯ ಹೆದ್ದಾರಿ ಹಾಗೂ ರೈಲ್ವೇ ಕಾಮಗಾರಿಗಳಲ್ಲಿ ಭೂಸ್ವಾದೀನ ಪಡಿಸಿಕೊಂಡ ಜಮೀನಿನ ರೈತರಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಮೊತ್ತ ದೊರೆಯಬೇಕು. ರೈಲ್ವೇ ಲೆವೆಲ್ ಕ್ರಾಸಿಂಗ್ ಕಾಮಗಾರಿಗಾಗಿ ಸಾರ್ವಜನಿಕರಿಗೆ ಅನಗತ್ಯ ತೊಂದರೆ ಉಂಟು ಮಾಡದೆ, ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಕಾಮಗಾರಿಗಾಗಿ ತೆಗೆದ ಹೊಂಡಗಳಿಗೆ ಸಾರ್ವಜನಿಕರಿಗೆ ಅಪಾಯವಾಗದ ರೀತಿಯಲ್ಲಿ ಫೆನ್ಸಿಂಗ್ ಅಥವಾ ಸೂಕ್ತ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು.
ಅಲ್ಲದೆ ಜಲಶುದ್ಧೀಕರಣ ಘಟಕ, ಪಶು ಚಿಕಿತ್ಸಾಲಯ, ಹೊಸ ಪದವಿಪೂರ್ವ ಕಾಲೇಜು, ಶಾಲಾ ಕಟ್ಟಡಗಳ ನಿರ್ಮಾಣ, ಬಸ್ ನಿಲ್ದಾಣ, ಬಸ್ ಡಿಪೋ, ವಿದ್ಯುತ್ ಉಪ ಘಟಕಗಳ ಸ್ಥಾಪನೆ, ಜಿಲ್ಲೆಯ ಹೋಬಳಿ ಮಟ್ಟದ ಕ್ರೀಡಾ ಚಟುವಟಿಕೆಗಳಿಗೆ ಜಮೀನು ಸೇರಿದಂತೆ ಇತರ ಇಲಾಖೆಗಳ ಕಚೇರಿ ಅಥವಾ ನೌಕರರ ವಸತಿ ಗೃಹಗಳ ನಿರ್ಮಾಣಕ್ಕಾಗಿ ಸಂಬAಧಪಟ್ಟ ಅಧಿಕಾರಿಗಳು ಅವಶ್ಯವಿರುವ ಜಮೀನನ್ನು ಗುರುತಿಸಿ, ಆಯಾ ತಾಲ್ಲೂಕುಗಳ ತಹಶೀಲ್ದಾರರೊಂದಿಗೆ ಸ್ಥಳಕ್ಕೆ ಭೇಟಿ ನೀಡಿ, ಬಳಿಕ ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಯಾವುದೇ ಸಮಸ್ಯೆಗಳಿದ್ದಲ್ಲಿ ಅದನ್ನು ಪುನಃ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಹೆಚ್ಚುವರಿ ಎಸ್ಪಿ ಹೇಮಂತಕುಮಾರ ಎನ್., ತಹಶೀಲ್ದಾರರಾದ ವಿಠ್ಠಲ್ ಚೌಗಲಾ, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲ್ಲೂಕುಗಳ ತಹಶೀಲ್ದಾರರು, ಭೂ ಸ್ವಾಧೀನ ಕಚೇರಿ, ರಾಷ್ಟಿçÃಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಇತರರು ಉಪಸ್ಥಿತರಿದ್ದರು.
