
ಕೈಮಗ್ಗ ನೇಕಾರರಿಗೆ ಸಾಲದ ನೆರವು : ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 5- ಕೈಮಗ್ಗ ಮತ್ತು ಜವಳಿ ಇಲಾಖೆಯಿಂದ 2024-25ನೇ ಸಾಲಿನ ಮುದ್ರಾ ಯೋಜನೆಯಡಿ ಕೊಪ್ಪಳ ಜಿಲ್ಲೆಯ ಕೈಮಗ್ಗ ನೇಕಾರರಿಗೆ ಬ್ಯಾಂಕ್ನಿAದ ಸಾಲದ ನೆರವಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮುದ್ರಾ ಯೋಜನೆಯಡಿ ಕೈಮಗ್ಗ ನೇಕಾರರಿಗೆ ಮಗ್ಗ ಖರೀದಿಸಲು ಅಥವಾ ದುಡಿಮೆ ಬಂಡವಾಳಕ್ಕಾಗಿ ರಾಷ್ಟಿçÃಕೃತ ಬ್ಯಾಂಕ್ನಿAದ ಸಾಲ ಪಡೆಯಲು ಜಿಲ್ಲೆಗೆ 30 ಗುರಿ ನಿಗದಿಪಡಿಸಲಾಗಿದ್ದು, ಪ್ರತಿ ಫಲಾನುಭವಿಗೆ ರೂ. 50,000 ರಂತೆ ಶೇ.20 ಮಾರ್ಜಿನ್ಮನಿ ಪಡೆಯಲು ಅವಕಾಶವಿರುತ್ತದೆ. ಕೈಮಗ್ಗ ನೇಕಾರರು ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ಉಪ ನಿರ್ದೇಶಕರ ಕಚೇರಿ, ಕೈಮಗ್ಗ ಮತ್ತು ಜವಳಿ ಇಲಾಖೆ, ಕೊಪ್ಪಳ ಇಲ್ಲಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08539-295469ಗೆ ಸಂಪರ್ಕಿಸಬಹುದಾಗಿದೆ ಎಂದು ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.