ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ, ಯು ಕೆ ಜಿ ಆರಂಬಿಸಲು ಮನವಿ
ಕರುನಾಡ ಬೆಳಗು ಸುದ್ದಿ
ಬಳ್ಳಾರಿ, 6- ರಾಜ್ಯದ ಎಲ್ಲ ಅಂಗನವಾಡಿ ಕೇಂದ್ರಗಳಲ್ಲಿ ಎಲ್ ಕೆ ಜಿ, ಯು ಕೆ ಜಿ ಆರಂಭಿಸಬೇಕೆಂದು ಅಂಗನವಾಡಿ ಕಾರ್ಯಕರ್ತೆಯರ ಮತ್ರ ಸಹಾಯಕಿಯರ ಫೆಡರೇಷನ್ ವತಿಯಿಂದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಸಂಕನೂರು ಅವರಿಗೆ ಮನವಿ ಸಲ್ಲಿಸಲಾಯಿತು.
ಫೆಡರೇಷನ್ ಜಿಲ್ಲಾ ಅಧ್ಯಕ್ಷೆ ಹಾಗೂ ರಾಜ್ಯ ಕಾರ್ಯದರ್ಶಿ ಎಸ್. ಅರ್ಕಾಣಿ, ಜಿಲ್ಲಾ ಪದಾಧಿಕಾರಿಗಳಾದ ಟಿ.ಇಂದಿರಾ, ಇ.ಮಂಗಮ್ಮ ಮೊದಲಾದವರ ನೇತೃತ್ವದಲ್ಲಿ ಜಿಪಂ ಸಿಇಓ ಅವರನ್ನು ಭೇಟಿಯಾದ ನಿಯೋಗದ ಸದಸ್ಯೆಯರು ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನ ಆಯ್ಕೆ ಮಾಡಿಕೊಳ್ಳಬೇಕು, ಅಂಗನವಾಡಿ ಬಾಡಿಗೆ ಕಟ್ಟಡಗಳಲ್ಲಿ, ಸ್ವಂತ ಕಟ್ಟಡಗಳಲ್ಲಿ ಎಲ್ ಕೆ ಜಿ, ಯು ಕೆ ಜಿಪ್ರಾರಂಭಿಸಲು ಆವಕಾಶ ಕಲ್ಪಿಸಿ ಕೊಡಬೇಕು, ಮಕ್ಕಳಿಗೆ ಬೇಕಾಗುವ ಯೂನಿಫಾರ್ಮ್, ಶೂ, ಬ್ಯಾಗ್, ಪಠ್ಯಪುಸ್ತಕಗಳನ್ನು ಅಂಗನವಾಡಿಗೆ ಕೊಡಬೇಕು. ಸಂಪನ್ಮೂಲ ವ್ಯಕ್ತಿಗಳಿಂದ ಶಿಕ್ಷಕರಿಗೆ ನೀಡುವ ರೀತಿಯಲ್ಲಿ ಹೆಚ್ಚಿನ ತರಬೇತಿಯನ್ನು ಅಂಗನವಾಡಿ ಕಾರ್ಯಕರ್ತೆರಿಗೆ ಕೊಡಬೇಕು. ಎಸ್ ಡಿ ಎಂ ಸಿ ಯೋಜನೆ ರದ್ದುಪಡಿಸಬೇಕು ಮತ್ತು ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಮಾಡಬೇಕು. ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಎಸ್ ಡಿ ಎಂ ಸಿ ಮೂಲಕ ಉಲ್ಬಣಗೊಂಡಿರುವ ಸಮಸ್ಯೆಯನ್ನು ತಕ್ಷಣ ಕೈಬಿಡಬೇಕು ಎಂದು ಒತ್ತಾಯಿಸಿ ಮನವಿ ಪತ್ರವನ್ನು ಸಲ್ಲಿಸಿದರು.
ಈ ವೇಳೆ ಮಾತನಾಡಿದ ಎಸ್.ಅರ್ಕಾಣಿ ಅವರು, ಈ ಪ್ರಕ್ರಿಯೆ ಕೈಬಿಡದ್ದಿದರೆ ಮುಂದಿನಗಳಲ್ಲಿ ಅರ್ನಿದಿಷ್ಟ ಉಗ್ರಹೋರಾಟ ಹಮ್ಮಿಕೊಳ್ಳಲಾಗುತ್ತದೆ. ಅಂಗನವಾಡಿ ವ್ಯವಸ್ಥೆಗೆ ಧಕ್ಕೆ ತರುವಂತಹ ಶಾಲೆಗಳಲ್ಲಿ ಎಲ್.ಕೆಜಿ ಮತ್ತು ಯುಕೆಜಿ ಪ್ರಾರಂಭಿಸುತ್ತಿರುವುದನ್ನು ವಿರೋಧಿಸಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೂ ಈ ಕುರಿತಂತೆ ಮನವಿ ಮಾಡಲಾಗಿದೆ. ದೇಶಾದ್ಯಂತ ಕಳೆದ 49 ವರ್ಷಗಳ ಹಿಂದೆ ಪ್ರಾರಂಭವಾಗಿರುವ ಸಮಗ್ರ ಶಿಶು ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಬಾಣಂತಿ ಮತ್ತು ಆರು ತಿಂಗಳಿಂದ ಆರು ವರ್ಷದ ವಯೋಮಾನದ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಲ್ಲಿ ಪಾಲನೆ, ಪೆÇೀಷಣೆ, ಕ್ರೀಡೆ, ಕಲಿಕಾ ಕೇಂದ್ರಗಳನ್ನು ಪರಿಣಾಮಕಾರಿಯಾಗಿ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಅಂಗನವಾಡಿ ಕೇಂದ್ರಗಳು ಆರೋಗ್ಯ ಪಾಲನೆ ಜೊತೆಗೆ ಮಹಿಳೆಯರ, ಮಕ್ಕಳ ಅಭಿವೃದ್ಧಿಗೆ ಶ್ರಮಿಸುತ್ತಿವೆ. ಅಂಗನವಾಡಿ ವ್ಯವಸ್ಥೆಯನ್ನು ಪ್ರಗತಿಪಥದತ್ತ ಕೊಂಡೊಯ್ಯಲು, ಬಲಪಡಿಸಲು ಸರ್ಕಾರಗಳು ಸಾಕಷ್ಟು ಅನುದಾನ ಒದಗಿಸಬೇಕೆಂದು ಹೇಳಿದರು.
ಇತ್ತೀಚಿನ ಕೆಲವು ವರ್ಷಗಳಲ್ಲಿ ಅಂಗನವಾಡಿ ಕೇಂದ್ರಗಳ ಶಾಲಾ ಪೂರ್ವ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರುವಂತಹ ಪ್ರಕ್ರಿಯೆಗಳು ಪ್ರಾರಂಭವಾಗಿವೆ. ಸರ್ಕಾರದ ಕಾರ್ಮಿಕ, ಗ್ರಾಮೀಣಾಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಶಿಶುಪಾಲನಾ ಕೇಂದ್ರಗಳು, ಕೂಸಿನ ಮನೆ, ಶಾಲೆಗಳಲ್ಲಿ ಶಾಲಾ ಪೂರ್ವ ಶಿಕ್ಷಣ, ಇತ್ಯಾದಿ ಬೇರೆ ಬೇರೆ ಹೆಸರುಗಳಲ್ಲಿ ತರಗತಿ ಪ್ರಾರಂಭಿಸಿ ಅಂಗನವಾಡಿ ವ್ಯವಸ್ಥೆಗೆ ಧಕ್ಕೆಯುಂಟಾಗುವಂತೆ ಪ್ರತಿಯಾಗಿ ಶಿಶುಪಾಲನಾ ಕೇಂದ್ರ ಹಾಗೂ ಶಾಲಾ ಪೂರ್ವ ತರಗತಿಗಳನ್ನು ಪಾರಂಭಿಸಲಾಗುತ್ತಿದೆ. ಈಗಾಗಲೇ ಸರ್ಕಾರ ಆರಂಭಿಸಿರುವ ಪಬ್ಲಿಕ್ ಶಾಲೆಗಳಲ್ಲಿ ಎಲ್.ಕೆ.ಜಿ. ಮತ್ತು ಯು.ಕೆ.ಜಿ.ಗಳನ್ನು ನಡೆಸಲಾಗುತ್ತಿದೆ. ಈ ಎಲ್ಲಾ ಪ್ರಕ್ರಿಯೆಗಳಿಂದಾಗಿ ಅಂಗನವಾಡಿ ಕೇಂದ್ರಗಳಿಗೆ ದಾಖಲಾಗಬೇಕಾದ 3 ರಿಂದ ಆರು ವರ್ಷದೊಳಗಿನ ವಯೋಮಾನದ ಮಕ್ಕಳು ವಿಘಟಿತರಾಗಿ ಶಾಸನಾತ್ಮಕವಾಗಿ ರೂಪಿತಗೊಂಡಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸವಲತ್ತುಗಳಿಂದ ವಂಚಿತರಾಗಲಿದ್ದಾರೆ. ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳ ಸಂಖ್ಯೆಯು ಕ್ಷೀಣಿಸಿ ಅಂಗನವಾಡಿ ವ್ಯವಸ್ಥೆ ದುರ್ಬಲಗೊಂಡು ಅಸ್ತವ್ಯಸ್ತಗೊಳ್ಳುವ ಅಪಾಯ ಎದುರಾಗಿದೆ. ಅಲ್ಲದೇ ಅಂಗನವಾಡಿ ಕೇಂದ್ರಗಳು ನಿರ್ವಹಿಸಬೇಕಾದ ಕೆಲಸವನ್ನು ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಗಳು ಒಂದೇ ವಯಸ್ಸಿನ ಮಕ್ಕಳಿಗೆ ತರಗತಿ ತೆರೆಯುವುದರಿಂದ ಸರ್ಕಾರಕ್ಕೆ ಆರ್ಥಿಕ ಹೊರೆಯಾಗಿ ಅನಗತ್ಯವಾಗಿ ಸರ್ಕಾರಿ ಹಣ ಪೆÇೀಲಾಗಲಿದೆ ಎಂದರು.
3 ರಿಂದ 6 ವರ್ಷ ವಯೋಮಾನದ ಮಕ್ಕಳಿಗಾಗಿ ಶಾಲೆಗಳಲ್ಲಿ ಎಲ್.ಕೆ.ಜಿ- ಯು.ಕೆ.ಜಿ. ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಶಿಕ್ಷಣ ನೀತಿ ರೂಪಿತವಾಗುವ ಮುನ್ನವೇ ಶಾಲಾ ಶಿಕ್ಷಣ ಇಲಾಖೆಯು ಅವಕಾಶ ಮಾಡಿಕೊಡುತ್ತಿರುವುದು ಸಮಗ್ರ ಶಿಶು ಅಭಿವೃದ್ಧಿಯಂತಹ ಮಹತ್ವದ ಯೋಜನೆಗೆ ವಿರುದ್ದವಾದ ಪ್ರಕ್ರಿಯೆಯಾಗಿರುತ್ತದೆ. ಶಾಲಾ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಾಲಾ ಶಿಕ್ಷಣಕ್ಕೆ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಾನವನ್ನು 6 ವರ್ಷ ಪೂರ್ಣಗೊಂಡಿರಬೇಕೆಂದು ನಿಗದಿಪಡಿಸಿದೆ. ಇಂತಹ ಸಂದರ್ಭದಲ್ಲಿ ಯಾವ ಶಾಸನಸಭೆಗಳಲ್ಲೂ ಸಹ ಚರ್ಚೆಗೆ ಬಾರದೇ ಇನ್ನೂ ರಾಜ್ಯ ಶಿಕ್ಷಣ ನೀತಿ ರೂಪಿಸಿ ಜಾರಿಗೊಳಿಸುವ ಮುಂಚೆಯೇ ಏಕಪಕ್ಷೀಯವಾಗಿ ಶಾಲೆಗಳಲ್ಲಿ ಎಲ್.ಕೆ.ಜಿ. -ಯು.ಕೆ.ಜಿ.ಗಳನ್ನು ಪ್ರಾರಂಭಿಸಿದರೆ ಮಕ್ಕಳ ಬೆಳವಣಿಗೆಯೂ ಕುಂಠಿತಗೊಳ್ಳುವುದರೊಂದಿಗೆ ಅಂಗನವಾಡಿಗಳು ಸೊರಗಿ ದುರ್ಬಲಗೊಳ್ಳಲಿವೆ ಎಂಬ ಆತಂಕವನ್ನು ವ್ಯಕ್ತಪಡಿಸಿದರು.
ಆದ್ದರಿಂದ ರಾಜ್ಯ ಸರ್ಕಾರ ಎಸ್ಡಿಎಂಸಿ ಮೂಲಕ ಶಾಲೆಗಳಲ್ಲಿ ಎಲ್.ಕೆ.ಜಿ ಮೂಲಕ ಪ್ರಕ್ರಿಯೆಗಳನ್ನು ತಡೆಯಬೇಕು. ಹಾಗೂ ಹೊಸದಾಗಿ ರಾಜ್ಯ ಶಿಕ್ಷಣ ನೀತಿಯ ಅಂಶಗಳನ್ನು ಯು.ಕೆ.ಜಿ.ಯನ್ನು ಪ್ರಾರಂಭಿಸುವ ಪರಾಮರ್ಶಿಸಿ ಅಂಗನವಾಡಿಗೆ ದಾಖಲಿಸುವ ಮಕ್ಕಳ ಹಾಗೂ ಪೂರ್ವ ತರಗತಿಗಳಿಗೆ ಸೇರ್ಪಡೆಗೊಳಿಸುವ ಮಕ್ಕಳ ವಯೋಮಾನ ನಿಗದಿಪಡಿಸುವ ಮೂಲಕ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತದೆ. ಸರ್ಕಾರ ಈ ಒಂದು ದೃಢ ನಿಲುವು ತೆಗೆದುಕೊಳ್ಳಲು ಕೂಡಲೇ ಅಂಗನವಾಡಿ ಸಂಘಟನೆಗಳು ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆಯ ಸಚಿವರು ಮತ್ತು ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಉಲ್ಬಣಗೊಳ್ಳಲಿರುವ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಕೋರಿದರು.
ಫೆಡರೇಷನ್ ಪದಾಧಿಕಾರಿಗಳಾದ ಪಿ.ಡಿ.ಮೀನಾ ಕುಮಾರಿ, ಗಂಗಮ್ಮ, ಪದ್ಮಾವತಿ, ಜಮೇಲಾ, ಕವಿತಾ, ನಾಗರತ್ನಮ್ಮ, ರತ್ನಮ್ಮ, ಪಿ.ಕಲಾವತಿ, ಸುನೀತಾ, ಗಂಗಮ್ಮ, ಮಂಗಳಗೌರಿ, ಈರಮ್ಮ, ಸ್ವರೂಪಾರಾಣಿ ಇನ್ನಿತರರು ಇದ್ದರು.
