2c136fae-be38-4577-97e1-318669006cc9

ವಿವಿಧ ಹುದ್ದೆಗಳ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನ

ಕರುನಾಡ ಬೆಳಗು ಸುದ್ದಿ

ವಿಜಯನಗರ, 11- ರಾಷ್ರೀಯ ಆರೋಗ್ಯ ಅಭಿಯಾನದ ಎನ್‌ಎಂಹೆಚ್‌ಪಿ, ಇ-ಆಸ್ಪಿಟಲ್ ಕಾರ್ಯಕ್ರಮಗಳಡಿಯಲ್ಲಿ ಆರೋಗ್ಯ ಇಲಾಖೆಯಿಂದ ವಿಜಯನಗರ ಜಿಲ್ಲೆಯ ಎರಡು ಹುದ್ದೆಗಳ ಆಯ್ಕೆಪಟ್ಟಿಗೆ ಆಕ್ಷೇಪಣೆ ಆಹ್ವಾನಿಸಲಾಗಿದೆ.

ಮನೋಸಾಮಾಜಿಕ ಕಾರ್ಯಕರ್ತರು ಒಂದು ಹುದ್ದೆ, ಪ್ರೋಗ್ರಾಮ್ ಮ್ಯಾನೇಜರ್ ಒಂದು ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಮನೋಸಾಮಾಜಿಕ ಕಾರ್ಯಕರ್ತರ ಮತ್ತು ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳ ನೇಮಕಾತಿಯ ಒಟ್ಟು ಅರ್ಜಿ ಸಲ್ಲಿಸಿದವರ ಪಟ್ಟಿ, ತಾತ್ಕಾಲಿಕ ಆಯ್ಕೆ, ಕಾಯ್ದಿರಿಸಿದ ಆಯ್ಕೆ ಪಟ್ಟಿ, ತಿರಸ್ಕರಿಸಿದ ಪಟ್ಟಿಗಳನ್ನು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಿದ್ದು, ಇದಕ್ಕೆ ಸಂಬAಧಿಸಿದAತೆ ಯಾವುದಾದರು ಆಕ್ಷೇಪಣೆಗಳಿದಲ್ಲಿ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಂದ ಜೂನ್ 17ರ ಸಂಜೆ 5 ಗಂಟೆಯೊಳಗಾಗಿ ಕಚೇರಿಯ ಸಮಯದಲ್ಲಿ ಲಿಖಿತ ರೂಪದಲ್ಲಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!