ಸಿಡಾಕ್ : ಉದ್ಯಮಶೀಲತಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 11- ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಬೆಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಕೊಪ್ಪಳ ಇವರಿಂದ ಸ್ವಯಂ ಉದ್ಯೋಗ ಪ್ರಾರಂಭಿಸುವ ನಿರುದ್ಯೋಗಿ ಯುವಕ ಯುವತಿಯರಿಗೆ ಮತ್ತು ಉದ್ಯಮ ಆಕಾಂಕ್ಷಿಗಳಿಗೆ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗದ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ, ಹಾಗೂ ಉದ್ಯಮ ನಿರ್ವಹಣೆ, ಉದ್ಯಮಶೀಲತೆ, ಉದ್ಯಮ ಪ್ರಾರಂಭದ ಹಂತಗಳು, ಉದ್ಯಮಗಳನ್ನು ಪ್ರಾರಂಭಿಸಲು ಸರ್ಕಾರದ ಯೋಜನೆಗಳು, ಸಾಲ ಸೌಲಭ್ಯಗಳು, ಬ್ಯಾಂಕ್ ಬಗ್ಗೆ, ಜಾಹೀರಾತು ಮತ್ತು ಮಾರುಕಟ್ಟೆಯ ಕುರಿತು ನೋಂದಣಿ ಮಾಡುವ ವಿಧಾನಗಳು, ಯಶಸ್ವಿ ಉದ್ಯಮಿಗಳ ಜೊತೆ ಸಂವಾದ, ಉದ್ಯಮ ನಿರ್ವಹಣೆ ಮಾಡುವ ವಿಧಾನಗಳು ಮತ್ತು ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುವುದು.
ಜಿಲ್ಲೆಯ 18 ರಿಂದ 45 ವಯೋಮಾನದ ಹಾಗೂ ಎಸ್ಎಸ್ಎಲ್ಸಿ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಜೂನ್ 18 ರೊಳಗೆ ಆಧಾರ್ ಕಾರ್ಡ್, ಜಾತಿ ಪ್ರಮಾಣ ಪತ್ರ, ರೇಶನ್ ಕಾರ್ಡ್ಗಳ ಕ್ಸೆರಾಕ್ಸ ಪ್ರತಿಗಳು, 2 ಪಾಸ್ಪೋರ್ಟ್ ಅಳತೆಯ ಫೋಟೋಗಳೊಂದಿಗೆ ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ ಕಛೇರಿ ಕೊಪ್ಪಳ ಆವರಣ, ನಗರಸಭೆ ಎದುರುಗಡೆ, ಕೊಪ್ಪಳ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 6362557332/6362681190 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಸಿಡಾಕ್ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
