ರೆಡ್ ಹ್ಯಾಂಡ್ ಆಗಿ ಬಲೆಗೆ ಬಿದ್ದ ಅಧಿಕಾರಿ
ಕರುನಾಡ ಬೆಳಗು ಸುದ್ದಿ
ಕೊಪ್ಪಳ , 13- ಯೋಜನಾ ನಿರಾಶ್ರಿತ ಪ್ರಮಾಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ ಸುನಿಲ್ ಕುಮಾರ್ ಕುಲಕರ್ಣಿ ಲೋಕಾಯುಕ್ತ ಬಲೆಗೆ ಸಿಕ್ಕಿ ಬಿದಿದ್ದಾರೆ.
ತಹಶಿಲ್ದಾರ ಕಚೇರಿಯಲ್ಲಿ ಸಿರಸ್ತೇದಾರ್ ಆಗಿರೋ ಸುನಿಲ್ ಕುಮಾರ್ ಕುಲಕರ್ಣಿ ಯೋಜನಾ ನಿರಾಶ್ರಿತರ ಪ್ರಮಾಣ ಪತ್ರ ನೀಡಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿ.37 ಸಾವಿರ ಹಣ ಪಡೆಯುವಾಗ ಸಿಕಗಕಿದ್ದಾರೆ.
ಕೊಪ್ಪಳ ತಾಲೂಕಿನ ಗಬ್ಬೂರು ಗ್ರಾಮದ ನಿವಾಸಿ ಕರಿಯಪ್ಪ ಅನ್ನೋರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇವರು ಕೊಪ್ಪಳ ತಹಶಿಲ್ದಾರ ಕಚೇರಿಯಲ್ಲಿ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡಾಗಿ ಸಿಕ್ಕಿದ್ದಾರೆ.
ಕೊಪ್ಪಳ ಲೋಕಾಯುಕ್ತ ಪಿಐ ಶೈಲಾ ಪ್ಯಾಟಿಶೆಟ್ಟರ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು , ರಾಯಚೂರು ಲೋಕಾಯುಕ್ತ ಎಸ್ಪಿ ಮಾರ್ಗದರ್ಶನದಲ್ಲಿ ದಾಳಿ
ಲೋಕಾಯುಕ್ತ ಅಧಿಕಾರಿಗಳ ಕಾರ್ಯಾಚರಣೆ ನಡರದಿರುವ ಮಾಹಿತಿ ಸಿಕ್ಕಿದೆ
