ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ (1)

ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 13- ಕೊಪ್ಪಳ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ ಜೂನ್ 12 ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯ ಅಂಗವಾಗಿ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವ ಮೂಲಕ ಬಾಲ ಕಾರ್ಮಿಕ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಮತ್ತು ಬಾಲ ಕಾರ್ಮಿಕ ಪದ್ಧತಿಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುವ ಬಗ್ಗೆ ಮಾಹಿತಿ ನೀಡಲಾಯಿತು.

ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆಯನ್ನು ಪ್ರತಿ ವರ್ಷ ಜೂನ್ 12 ರಂದು ಆಚರಣೆ ಮಾಡಿಕೊಂಡು ಬರಲಾಗಿದೆ. ಕಾರ್ಮಿಕರನ್ನು ನೇಮಿಸಿಕೊಂಡು ದುಡಿಸಿಕೊಳ್ಳುವ ಮಾಲಿಕರಿಗೆ ಮತ್ತು ಪೋಷಕರಿಗೆ ತಿಳಿವಳಿಕೆ ನೀಡಿ ಅಂತಹ ಬಾಲಕಾರ್ಮಿಕರು ಕಂಡರೆ ಅವರನ್ನು ಅದರಿಂದ ಮುಕ್ತಗೊಳಿಸಿ ಹತ್ತಿರದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಮಾಡಿಸಿ ಶಿಕ್ಷಣ ಕೊಡಿಸಲು ಮಾಹಿತಿ ನೀಡುವ ಬಗ್ಗೆ ಹಾಗೂ ಬಾಲ ಕಾರ್ಮಿಕರು ಮತ್ತು ಕಿಶೋರ ಕಾರ್ಮಿಕರು ತಯಾರಿಸಿದ ಯಾವುದೇ ವಸ್ತುಗಳನ್ನು ಖರೀದಿಸುವುದಿಲ್ಲ ಮತ್ತು ನಮ್ಮ ಸುತ್ತ ಮುತ್ತಲಿನ ಮತ್ತು ನಾವು ಕೆಲಸ ಮಾಡುವ ಸ್ಥಳಗಳಲ್ಲಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ ಎಂದು ಸಿಬ್ಬಂದಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ಈ ಸಂಧರ್ಭ ಉಪಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯೂರೇಟರ್ ಮೈಲಾರಪ್ಪ, ಶಿಕ್ಷಣ ಸಹಾಯಕ ಫಕೀರಸಾಬ್, ತಾಂತ್ರಿಕ ಸಹಾಯಕ ಮಹಾಲಿಂಗಪ್ಪ, ತಂತ್ರಜ್ಞ ಶಂಕ್ರಪ್ಪ, ನಿಯೋಜಿತ ಸಿಬ್ಬಂದಿ ಫಯಾಜುದ್ದೀನ್ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲಾ ಪ್ರಯೋಗಾಲಯದ ಸಿಬ್ಬಂದಿಗಳಾದ ರೇಣುಕಾ, ರುಕ್ಮಿಣಿ, ಅರ್ಜುನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!