ಯಲಬುರ್ಗಾ : ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 14- 2024-25ನೇ ಸಾಲಿಗಾಗಿ ಯಲಬುರ್ಗಾ / ಕುಕನೂರ ತಾಲೂಕಾ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ / ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿ ಮೆಟ್ರಿಕ್ ಪೂರ್ವ ವಸತಿ ನಿಲಯಗಳಾದ ಯಲಬುರ್ಗಾ ತಾಲ್ಲೂಕಿನ ಯಲಬುರ್ಗಾ, ಹಿರೇಅರಳಿಹಳ್ಳಿ, ಗಾಣದಾಳ, ಚಿಕ್ಕಮ್ಯಾಗೇರಿ, ಹಿರೇವಂಕಲಕುAಟಾದ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಯಲಬುರ್ಗಾ ಹಾಗೂ ಬೇವೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಕುಕನೂರು ತಾಲ್ಲೂಕಿನ ಕುಕನೂರು, ಸೋಂಪುರ, ರಾಜೂರಿನ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಮಂಗಳೂರಿನ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ಪರಿಶಿಷ್ಟ ಜಾತಿ ಮೆಟ್ರಿಕ್ ನಂತರ ವಸತಿ ನಿಲಯಗಳಾದ ಯಲಬುರ್ಗಾ ತಾಲ್ಲೂಕಿನ ಯಲಬುರ್ಗಾದ ಮೆಟ್ರಿಕ್ ನಂತರದ (ಪ:ಜಾತಿ) ಬಾಲಕರ ವಸತಿ ನಿಲಯ ಹಾಗೂ ಮಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಕುಕನೂರು ತಾಲ್ಲೂಕಿನ ಕುಕನೂರಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ವೆಬ್ಸೈಟ್ www.sw.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಝರಾಕ್ಸ್ ಪ್ರತಿ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ ಕಾರ್ಡ್ ಝರಾಕ್ಸ್ ಪ್ರತಿ, ಪಾಸ್ಪೋರ್ಟ್ ಅಳತೆಯ 04 ಫೋಟೋಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಯಲಬುರ್ಗಾ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
