ಕೊಪ್ಪಳ : ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಸತಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 14- 2024-25ನೇ ಸಾಲಿಗಾಗಿ ಕೊಪ್ಪಳ ತಾಲೂಕಾ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಮೆಟ್ರಿಕ್ ಪೂರ್ವ / ಮೆಟ್ರಿಕ್ ನಂತರದ ಬಾಲಕ / ಬಾಲಕಿಯರ ವಸತಿ ನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳದ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ ಹಾಗೂ ಕೊಪ್ಪಳ, ಕವಲೂರು, ಬೂದಗುಂಪಾ, ಗೊಂಡಬಾಳ, ಕೂಕನಪಳ್ಳಿ(ಎಸ್ಟಿ), ಗಿಣಗೇರಾ, ಬಿಸರಳ್ಳಿ ಮತ್ತು ಚಿಲಕಮುಖಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿನಿಲಯಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಬಹುದು.
ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ, ಕೊಪ್ಪಳ-1(ಎಸ್ಸಿ), ಕೊಪ್ಪಳ-2(ಎಸ್ಸಿ), ಕೊಪ್ಪಳ-3(ಎಸ್ಸಿ), ಕೊಪ್ಪಳ-4(ಎಸ್ಸಿ), ಕೊಪ್ಪಳ(ಎಸ್ಟಿ), ಕೊಪ್ಪಳ(ಪಿಯುಸಿ)(ಎಸ್ಟಿ) ಹಾಗೂ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯ, ಕೊಪ್ಪಳ ಮತ್ತು ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯ, ಕೊಪ್ಪಳ-1(ಎಸ್ಸಿ), ಕೊಪ್ಪಳ-2(ಎಸ್ಸಿ), ಕೊಪ್ಪಳ-3(ಎಸ್ಸಿ), ಕೊಪ್ಪಳ(ಎಸ್ಟಿ) ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.
ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ವೆಬ್ಸೈಟ್ www.sw.kar.nic.in ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ, ಅರ್ಜಿ ಪ್ರತಿಯೊಂದಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹಾಗೂ ಹಿಂದಿನ ತರಗತಿಯ ಅಂಕಪಟ್ಟಿಯ ದೃಢೀಕೃತ ಝರಾಕ್ಸ್ ಪ್ರತಿ, ವಿದ್ಯಾರ್ಥಿ ಮತ್ತು ಪೋಷಕರ ಆಧಾರ ಕಾರ್ಡ್ ಝರಾಕ್ಸ್ ಪ್ರತಿ, ಪಾಸ್ಪೋರ್ಟ್ ಅಳತೆಯ 04 ಫೋಟೋಗಳನ್ನು ಸಹಾಯಕ ನಿರ್ದೇಶಕರು(ಗ್ರೇಡ್-1) ಸಮಾಜ ಕಲ್ಯಾಣ ಇಲಾಖೆ, ಕೊಪ್ಪಳ ಕಚೇರಿಗೆ ಸಲ್ಲಿಸಬೇಕು ಎಂದು ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
