2c136fae-be38-4577-97e1-318669006cc9

18 ರಂದು ಅಂಚೆ ಇಲಾಖೆಯ ನಿವೃತ್ತ ಪಿಂಚಣಿದಾರರಿಗಾಗಿ : ಪಿಂಚಣಿ ಅದಾಲತ್

ಕರುನಾಡ ಬೆಳಗು ಸುದ್ದಿ

ಬಳ್ಳಾರಿ, 14- ಅಂಚೆ ಇಲಾಖೆಯಿಂದ ನಿವೃತ್ತರಾದ ಸರ್ಕಾರದಿಂದ ಪಿಂಚಣಿ ಪಡೆಯುತ್ತಿರುವ ಇಲಾಖಾ ನೌಕರರಿಗಾಗಿ ಮತ್ತು ಕುಟುಂಬ ಪಿಂಚಣಿ ಪಡೆಯುತ್ತಿರುವ ನಿವೃತ್ತ ಅಂಚೆ ನೌಕರರ ಕುಟುಂಬದವರಿಗಾಗಿ ಜೂ.18 ರಂದು  ಸಂಜೆ 4ಕ್ಕೆ ಬಳ್ಳಾರಿ ವಿಭಾಗೀಯ ಅಂಚೆ ಕಚೇರಿಯಲ್ಲಿ ಪಿಂಚಣಿ ಅದಾಲತ್ ಆಯೋಜಿಸಲಾಗಿದೆ.

ಪಿಂಚಣಿದಾರರು ತಮ್ಮ ಕುಂದು-ಕೊರತೆಗಳಿದ್ದರೆ ಅಂಚೆ ಅಧೀಕ್ಷಕರು, ಬಳ್ಳಾರಿ ವಿಭಾಗ, ವಿಭಾಗೀಯ ಕಾರ್ಯಾಲಯ ಕೋಟೆ, ಬಳ್ಳಾರಿ, ಅವರಿಗೆ ಜೂ.18  ರ ಮುಂಚಿತವಾಗಿ ತಲುಪುವಂತೆ ಪತ್ರ ಮುಖೇನ ಅಥವಾ doballari.ka@indiapost.gov.in ಗೆ ಇ-ಮೇಲ್ ಮುಖಾಂತರ ಕಳುಹಿಸಿಕೊಡಬಹುದು ಅಥವಾ ತಮ್ಮ ಅಹವಾಲುನೊಂದಿಗೆ ಜೂ.18 ರಂದು ನಡೆಯುವ ಪಿಂಚಣಿ ಅದಾಲತ್‍ನಲ್ಲಿ ಭಾಗವಹಿಸಬಹುದು. ಅದಾಲತ್‍ನಲ್ಲಿ ಭಾಗವಹಿಸುವವರಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ ಎಂದು ಬಳ್ಳಾರಿ ವಿಭಾಗ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!