ಇರಕಲ್_ಗಡಾದಲ್ಲಿ ಕುಷ್ಠರೋಗ ಜಾಗೃತಿ ಕಾರ್ಯಕ್ರಮ

ಇರಕಲ್‌ಗಡಾ : ಕುಷ್ಠರೋಗ ಜಾಗೃತಿ ಕಾರ್ಯಕ್ರಮ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳ ಕಛೇರಿ, ಕೊಪ್ಪಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇರಕಲ್‌ಗಡಾ ಇವರ ಸಂಯುಕ್ತಾಶ್ರಯದಲ್ಲಿ ಜೂನ್ 19 ರಂದು ಇರಕಲ್‌ಗಡಾ ವ್ಯಾಪ್ತಿಯ ತಾಳಕನಕಾಪೂರ ಗ್ರಾಮದ ಡಾ|| ಬಿ.ಆರ್. ಅಂಬೇಡ್ಕರ್ ವೃತ್ತದ ಹತ್ತಿರ “ರಾಷ್ಟಿçÃಯ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮದಡಿಯಲ್ಲಿ” ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದ ಕುರಿತು ಮಾತನಾಡಿದ ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳಾದ ಡಾ|| ಪ್ರಕಾಶ ಹೆಚ್ ಅವರು, ಯಾರಿಗಾದರೂ ಮೈ ಮೇಲೆ ತಿಳಿ-ಬಿಳಿ ತಾಮ್ರವರ್ಣದ ಸ್ಪರ್ಶಜ್ಞಾನವಿಲ್ಲದ 5 ಅಥವಾ 5ಕ್ಕಿಂತ ಹೆಚ್ಚು ಮಚ್ಚೆಗಳು ಇದ್ದರೆ, ಪಾದಗಳ ದೌರ್ಬಲ್ಯ, ಬೆರಳುಗಳ ದೌರ್ಬಲ್ಯ, ತ್ವಚೆಯ ಮೇಲೆ ಕೆಂಪಾದ ಬಾವು, ಕಣ್ಣು ಮುಚ್ಚುವಲ್ಲಿ ತೊಂದರೆ ಕಾಣಿಸಿಕೊಂಡರೆ, ಇವು ಕುಷ್ಠರೋಗದ ಲಕ್ಷಣಗಳಾಗಿರಬಹುದು. ಆದ್ದರಿಂದ ಇಂತಹ ಲಕ್ಷಣಗಳು ಯಾರಿಗಾದರು ಕಾಣಿಸಿಕೊಂಡರೆ, ತಕ್ಷಣ ತಮ್ಮ ಸಮೀಪದ ಇರಕಲ್‌ಗಡಾ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಂಡು, ಖಚಿತ ಪಟ್ಟರೆ ಉಚಿತವಾಗಿ ಚಿಕಿತ್ಸೆ ಪಡೆಯಿರಿ. ಇದಕ್ಕೆ ಯಾರೂ ಹಿಂಜರಿಯಬಾರದು. ಇದು ಮೈಕ್ರೊಬ್ಯಾಕ್ಟಿರಿಯಾ ಲೆಪ್ರೆöÊ ಎಂಬ ಸೂಕ್ಷಾö್ಮಣುವಿನಿಂದ ಗಾಳಿ ಮೂಲಕ ಹರಡುತ್ತದೆ. ಇದೊಂದು ಸಾಂಕ್ರಾಮಿಕ ರೋಗವಾಗಿದೆ. ರೋಗಿಯು ಕೆಮ್ಮುವುದರ ಮೂಲಕ ಮತ್ತು ಸೀನುವುದರ ಮೂಲಕ ಒಬ್ಬರಿಂದ ಇನ್ನೊಬ್ಬರಿಗೆ ಹರಡುತ್ತದೆ. ಇದು ಖಂಡಿತ ಗುಣಮುಖವಾಗುವಂತ ಖಾಯಿಲೆಯಾಗಿದೆ. ಎಂ.ಡಿ.ಟಿ ಚಿಕಿತ್ಸೆಯಿಂದ ಗುಣ ಪಡಿಸಬಹುದು. ತಿಳಿ-ಬಿಳಿ ತಾಮ್ರವರ್ಣದ ಸ್ಪರ್ಶಜ್ಞಾನವಿಲ್ಲದ ಮಚ್ಚೆಗಳಿದ್ದರೆ ನಿರ್ಲಕ್ಷö್ಯತೆ ಮಾಡದೆ, ಪರೀಕ್ಷಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳಿ ಎಂದು ತಿಳಿಸಿದರು.

ಇರಕಲ್‌ಗಡಾ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ|| ಲಕ್ಷಿö್ಮÃ ಅವರು ಮಾತನಾಡಿ, ಕುಷ್ಠರೋಗ ಯಾವುದೇ ದೇವರ ಶಾಪ ಹಾಗೂ ಪಾಪ ಮಾಡುವುದರಿಂದ ಬರುವುದಿಲ್ಲ. ಇದು ಮೈಕ್ರೊಬ್ಯಾಕ್ಟಿರಿಯಾ ಲೆಪ್ರೆöÊ ಎಂಬ ಸೂಕ್ಷಾö್ಮಣುವಿನಿಂದ ಹರಡುತ್ತದೆ. ಇದಕ್ಕೆ ಸಂಪೂರ್ಣವಾಗಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಇದಕ್ಕೆ ಯಾರೂ ಭಯಪಡುವ ಅಗತ್ಯವಿಲ್ಲ. ಚರ್ಮದ ಯಾವುದೇ ಖಾಯಿಲೆ ಇದ್ದರು ತಮ್ಮ ಮನೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಭೇಟಿ ನೀಡಿದಾಗ ಪರೀಕ್ಷಿಸಿಕೊಳ್ಳುವಂತೆ ಸಲಹೆ ನೀಡಿದರು.

ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಿವಾನಂದ ವ್ಹಿ.ಪಿ ಅವರು ಮಾತನಾಡಿ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಕುಷ್ಠರೋಗದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದರು.

ನಂತರ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮಾಡಲಾಯಿತು. ಗ್ರಾಮದಲ್ಲಿ 06 ತಂಡಗಳನ್ನು ರಚನೆ ಮಾಡಿ, ಮನೆ ಮನೆಗೆ ಭೇಟಿ ನೀಡಿ, ಕರಪತ್ರ ಹಂಚುವುದರ ಮೂಲಕ ಆರೋಗ್ಯ ತಪಾಸಣೆ ಮಾಡಿ, ಅರಿವು ಮೂಡಿಸಿ, ಸಮೀಕ್ಷೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಿ.ಪ್ರಾ.ಆ.ಸು.ಅ ಶೈಲಜಾ ಪಾಟೀಲ್, ಮೇಲ್ವಿಚಾರಕರಾದ ವೀರಭದ್ರಪ್ಪ, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಸಂಗಯ್ಯ ಕೆ, ಪರಶುರಾಮ, ರಾಜಶೇಖರ, ಸುರೇಶ್, ಜಯಪ್ರಕಾಶ, ಪ್ರಿಯಾಂಕ, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಶಾಲಾ ಮುಖ್ಯೋಪಾಧ್ಯಾಯರು/ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

error: Content is protected !!