2c136fae-be38-4577-97e1-318669006cc9

ಗಂಗಾವತಿ ನಗರಸಭೆ : ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 20- 2024-25 ನೇ ಸಾಲಿನ ದೀನ್‌ದಯಾಳ ಅಂತ್ಯೋದಯ- ರಾಷ್ಟಿçÃಯ ನಗರ ಜೀವನೋಪಾಯ ಅಭಿಯಾನದಡಿ ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ವಾರ್ಡ್ ಮತ್ತು ಪ್ರದೇಶಮಟ್ಟದ ಒಕ್ಕೂಟಗಳಲ್ಲಿ ಸ್ವಯಂ ಉದ್ಯೋಗ ಪ್ರಾರಂಭಿಸಿಕೊಳ್ಳಲು ಮತ್ತು ಗುಂಪು ಚಟುವಟಿಕೆ ನಿರ್ವಹಿಸುವವರೆಗೆ ಸಾಲ ಸೌಲಭ್ಯಕ್ಕಾಗಿ ಹಾಗೂ ಸ್ವ-ಸಹಾಯ ಸಂಘಗಳನ್ನು ರಚಿಸುವ ಕುರಿತು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸ್ವಯಂ ಉದ್ಯೋಗ ಕಾರ್ಯಕ್ರಮ ವೈಯಕ್ತಿಕ, ಸ್ವ-ಸಹಾಯ ಗುಂಪುಗಳಿಗೆ ಸಾಲ ಮತ್ತು ಬಡ್ಡಿ ಸಹಾಯ ಧನ, ಸ್ವ ಸಹಾಯ ಗುಂಪುಗಳ ರಚನೆ, ಸ್ವ ಸಹಾಯ ಗುಂಪುಗಳ ಪ್ರದೇಶ ಮಟ್ಟದ ಒಕ್ಕೂಟಗಳ ರಚನೆ, ನಗರದ ಬೀದಿ ಬದಿ ವ್ಯಾಪಾರಸ್ಥರಿಗೆ ವಿಶೇಷ ಕಿರು ಸಾಲ ಸೌಲಭ್ಯಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು.

ಅರ್ಜಿಗಳನ್ನು ಕಾರ್ಯಾಲಯದ ಡೇ-ನಲ್ಮ್ ವಿಭಾಗದಲ್ಲಿ ಪಡೆದು ಭರ್ತಿ ಮಾಡಿ, ಅರ್ಜಿಯೊಂದಿಗೆ ವಾಸಸ್ಥಳ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ , ವಿದ್ಯಾರ್ಹತೆ ಪ್ರಮಾಣ ಪತ್ರಗಳು, ರೇಶನ್ ಕಾರ್ಡ್, ಚುನಾವಣೆ ಗುರುತಿನ ಚೀಟಿ, ಆಧಾರ್ ಕಾರ್ಡ್ (ಕಡ್ಡಾಯವಾಗಿ ಮೊಬೈಲ್ ನಂಬರ್ ಬ್ಯಾಂಕ್ ಲಿಂಕನ್ನು ಹೊಂದಿರತಕ್ಕದ್ದು), ನಗರಸಭೆಯಿಂದ ನೀಡಿರುವ ಉದ್ದಿಮೆ ಪರವಾನಿಗೆ ಪತ್ರ, ಪಾಸ್‌ಪೋರ್ಟ್ ಸೈಜ್ ಫೋಟೋ / ಪ್ರಸ್ತುತ ವ್ಯಾಪಾರದ ಫೋಟೋ, ಕೋರ್ಟ್ ಆಫಿಡವಿಟ್, ಬ್ಯಾಂಕ್ ಪಾಸ್ ಬುಕ್ ಮತ್ತು ಪಾನ್ ಕಾರ್ಡಗಳ ಪ್ರತಿಗಳನ್ನು ಸ್ವಯಂ ದೃಢೀಕರಿಸಿ ದ್ವಿಪ್ರತಿಯಲ್ಲಿ ಜುಲೈ 15 ರ ಸಂಜೆ 05.30 ಗಂಟೆಯೊಳಗೆ ನಗರಸಭೆ ಕಾರ್ಯಾಲಯಕ್ಕೆ ಸಲ್ಲಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ, ಗುರಿಗೆ ಅನುಗುಣವಾಗಿ ಅರ್ಜಿಗಳನ್ನು ಸ್ವೀಕರಿಸುವ ಕುರಿತು ಪೌರಾಯುಕ್ತರವರ ನಿರ್ಧಾರವೇ ಅಂತಿಮವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ವೇಳೆಯಲ್ಲಿ ಡೇ-ನಲ್ಮ್ ವಿಭಾಗದ ಸಮುದಾಯ ಸಂಘಟನಾಧಿಕಾರಿ ವಿಜಯಲಕ್ಷೀ: 9886391338 ಹಾಗೂ ಕಾಂತಮ್ಮ ಪ್ರ.ದ.ಸ. 9035096205 ಇವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಬಹುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!