ಜಿಲ್ಲಾಡಳಿತದಿಂದ ಜೂ.21 ರಂದು 10ನೇ ಅಂತರಾಷ್ಟ್ರೀಯ ಯೋಗ ದಿನ ಆಚರಣೆ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, 20- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಕೊಪ್ಪಳ ಹಾಗೂ ಕೊಪ್ಪಳ ಜಿಲ್ಲೆಯ ವಿವಿಧ ಇಲಾಖೆಗಳು ಮತ್ತು ಯೋಗ ಸಂಸ್ಥೆಗಳ ಸಹಯೋಗದಲ್ಲಿ ‘ಸ್ವಂತ ಮತ್ತು ಸಮಾಜಕ್ಕಾಗಿ ಯೋಗ’ ಎಂಬ ಘೋಷವಾಕ್ಯದೊಂದಿಗೆ ಜೂನ್ 21 ರಂದು ಬೆಳಿಗ್ಗೆ 06.30 ಗಂಟೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ 10ನೇ ಅಂತರಾಷ್ಟಿçÃಯ ಯೋಗ ದಿನಾಚರಣೆ-2024 ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು, ಕರ್ನಾಟಕ ಸರಕಾರ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ಉದ್ಘಾಟಿಸುವರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡೂರಾವ್, ವಿರೋಧ ಪಕ್ಷದ ಮುಖ್ಯ ಸಚೇತಕರು, ಕರ್ನಾಟಕ ವಿಧಾನಸಭೆ ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹನಮಗೌಡ ಪಾಟೀಲ್, ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಕಾರ್ಯಕ್ರಮದ ಘನುಪಸ್ಥಿತಿ ವಹಿಸುವರು. ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಬಸವರಾಜ ಹಿಟ್ನಾಳ, ಶಾಸಕರಾದ ಜಿ.ಜನಾರ್ಧನರೆಡ್ಡಿ, ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ಮುನಿರಾಬಾದ್ನ ತುಂಗಭದ್ರಾ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್ಸಾಬ್ ನಬೀಬ್ಸಾಬ್ ದೋಟಿಹಾಳ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಕೃಷ್ಣ ಭಾಗ್ಯ ಜಲನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ.ಮೋಹನರಾಜ, ಆಯುಷ್ ನಿರ್ದೇಶನಾಲಯದ ಆಯುಕ್ತರಾದ ಶ್ರೀನಿವಾಸುಲು ಅವರು ಆಗಮಿಸುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಭಾಗವಹಿಸುವರು ಎಂದು ಜಿಲ್ಲಾ ಆಯುಷ್ ಅಧಿಕಾರಿಗಳಾದ ಡಾ.ಯಮನಪ್ಪ ಜೆ.ಶಿರವಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
