kdp meeting-1b

ರೈತರಿಗೆ ಸಮರ್ಪಕವಾಗಿ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಿ : ಹೆಚ್.ಆರ್.ಗವಿಯಪ್ಪ

ಕರುನಾಡ ಬೆಳಗು ಸುದ್ದಿ

ವಿಜಯನಗರ, 21- ವಿಜಯನಗರ ವಿಧಾನಸಭಾ ಕ್ಷೇತ್ರದ ಬಹುತೇಕ ಎಲ್ಲಾ ಹೋಬಳಿಗಳಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಬಿತ್ತನೆ ಕಾರ್ಯ ಆರಂಭಗೊAಡಿದ್ದು ರೈತರಿಗೆ ಯಾವುದೇ ಕಾರಣಕ್ಕು ಬಿತ್ತನೆ ಬೀಜಗಳು ಮತ್ತು ರಸಗೊಬ್ಬರದ ಕೊರತೆಯಾಗದಂತೆ ನೋಡಿಕೊಳ್ಳಬೇಕು ಎಂದು ಶಾಸಕರಾದ ಹೆಚ್.ಆರ್.ಗವಿಯಪ್ಪ ಹೇಳಿದರು.

ಜೂನ್ 19ರಂದು ತಾಲೂಕು ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ಹೊಸಪೇಟೆ ತಾಲೂಕುಮಟ್ಟದ ತ್ರೆöÊಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

ಬೇರೆ ಬೇರೆ ವಿಧಾನಸಭಾ ಕ್ಷೇತ್ರಗಳಿಗೆ ಹೋಲಿಸಿದಲ್ಲಿ ಹೊಸಪೇಟೆ ತಾಲೂಕಿನಲ್ಲಿ ಜೂನ್1ರಿಂದ ಜೂನ್ 14ರವರೆಗೆ 221.6 ಮಿ.ಮೀ ಮಳೆಯಾಗಿದೆ. ಮಳೆಗಳು ಉತ್ತಮವಾಗಿ ಸುರಿಯುತ್ತಿರುವುದರಿಂದ ರೈತರಲ್ಲಿ ಹೊಸ ಆಶಾಭಾವನೆ ಮೂಡಿದೆ. ಆದ್ದರಿಂದ ವಿಜಯನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಎಲ್ಲಾ ರೈತ ಸಂಪರ್ಕ ಕೇಂದ್ರಗಳಲ್ಲಿ ಸಹ ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಣೆಗೆ ಅಗತ್ಯ ವ್ಯವಸ್ಥೆ ಮಾಡಬೇಕು ಎಂದು ಶಾಸಕರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಿತ್ತನೆ ಸಮಯದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರದ ಪೂರೈಕೆ ಜೊತೆಗೆ ರೈತರಿಗೆ ಉತ್ತಮ ಬೆಳೆ ನಿರ್ವಹಣೆಯ ಬಗ್ಗೆ ಮಾರ್ಗದರ್ಶನ ಮಾಡಬೇಕು. ರಸಗೊಬ್ಬರ ಬದಲಿಗೆ ಸಾವಯವ ಗೊಬ್ಬರ ಬಳಸಲು, ಕಡಿಮೆ ಮಳೆಗೆ ಉತ್ತಮ ಇಳುವರಿ ಬರುವ ತಳಿಯ ಬೀಜಗಳನ್ನು ಬಿತ್ತನೆ ಮಾಡಲು, ಬೆಳೆಗಳಿಗೆ ಸರಿಯಾದ ಔಷಧೋಪಚಾರ, ಕಳೆನಾಶಕ ಬಳಕೆ ಸೇರಿದಂತೆ ಬೇರೆ ಬೇರೆ ವಿಷಯಗಳ ಬಗ್ಗೆ ಕೃಷಿ ವಿಜ್ಞಾನಿಗಳು, ತಜ್ಞ ರೈತರಿಂದ, ಸಾವಯವ ಕೃಷಿಕರಿಂದ ತಿಳಿ ಹೇಳುವ ವ್ಯವಸ್ಥೆ ಮಾಡಬೇಕು ಎಂದು ಶಾಸಕರು ಅಧಿಕಾರಿಗಳಿಗೆ ಸೂಚನೆ ನೀಡಿದರು.

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಹೊಸಪೇಟೆ ತಾಲೂಕಿನಲ್ಲಿ 9100 ಹೆಕ್ಟೇರ್ ಪ್ರದೇಶದಲ್ಲಿ ನೀರಾವರಿ ಹಾಗೂ 5335 ಹೆಕ್ಟರ್ ಪ್ರದೇಶದಲ್ಲಿ ಖುಷ್ಕಿ ಬಿತ್ತನೆ ಗುರಿ ಹೊಂದಿದ ಪೈಕಿ ನೀರಾವರಿ ಪ್ರದೇಶದಲ್ಲಿ 1774 ಹೆಕ್ಟೇರನಲ್ಲಿ ಮತ್ತು ಖುಷ್ಕಿಯಲ್ಲಿ 2234 ಹೆಕ್ಟೇರನಲ್ಲಿ ಬಿತ್ತನೆ ಪ್ರಗತಿಯಾಗಿದೆ. ಜೂನ್ 20ರವರೆಗೆ ಬೆಳೆವಾರು ಹೊಸಪೇಟೆ ತಾಲೂಕಿನಲ್ಲಿ 127 ಹೆಕ್ಟೇರನಲ್ಲಿ ಭತ್ತ, 821 ಹೆಕ್ಟೇರನಲ್ಲಿ ಜೋಳ, 5110 ಹೆಕ್ಟೇರನಲ್ಲಿ ಮುಸುಕಿನ ಜೋಳ, 127 ಹೆಕ್ಟೇರನಲ್ಲಿ ತೊಗರಿ, 155 ಹೆಕ್ಟರ್ ಪ್ರದೇಶದಲ್ಲಿ ಶೇಂಗಾ, 635 ಹೆಕ್ಟೆರ್ ಪ್ರದೇಶದಲ್ಲಿ ಸೂರ್ಯಕಾಂತಿ, 654 ಹೆಕ್ಟೇರನಲ್ಲಿ ಹತ್ತಿ, 1400 ಹೆಕ್ಟೇರನಲ್ಲಿ ಕಬ್ಬು ಬಿತ್ತನೆಯಾಗಿದೆ ಎಂದು ಕೃಷಿ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

2023-24ನೇ ಸಾಲಿನಲ್ಲಿ ರಿಯಾಯಿತಿ ದರದಲ್ಲಿ ಬಿತ್ತನೆ ಬೀಜ ವಿತರಣೆ, ಸಸ್ಯ ಸಂರಕ್ಷಣೆ ಯೋಜನೆ, ಸೂಕ್ಷö್ಮ ನೀರಾವರಿ ಯೋಜನೆ, ಕೃಷಿ ಯಾಂತ್ರೀಕರಣ ಯೋಜನೆ ಸೇರಿದಂತೆ ನಾನಾ ಯೋಜನೆಗಳಿಗೆ ನಿಗದಿಪಡಿಸಿದ ಭೌತಿಕ ಗುರಿ ಮತ್ತು ಆರ್ಥಿಕ ಗುರಿಯ ಪೈಕಿ ಶೇ.100ರಷ್ಟು ಸಾಧನೆ ತೋರಲಾಗಿದೆ. ಪ್ರಸ್ತಕ ವರ್ಷವು ಸಹ ವಿವಿಧ ಯೋಜನೆಗಳ ಪ್ರಗತಿಗೆ ಹೆಚ್ಚಿನ ಒತ್ತು ಕೊಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಹೊಸಪೇಟೆ ತಾಲೂಕಿಗೆ ಒಟ್ಟು 343 ಅಂಗನವಾಡಿ ಕೇಂದ್ರಗಳು ಮಂಜೂರಾಗಿ ಕಾರ್ಯನಿರ್ವಹಿಸುತ್ತಿವೆ. ಈ ಪೈಕಿ 191 ಕೇಂದ್ರಗಳಿಗೆ ಸ್ವಂತ ಕಟ್ಟಡ ಇದೆ. 117 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿವೆ. ಶಾಲೆಗಳಲ್ಲಿ 18 ಮತ್ತು ಸಮುದಾಯ ಭವನದಲ್ಲಿ 12 ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೊಸಪೇಟೆ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಮಕ್ಕಳ ಶೈಕ್ಷಣಿಕ ಪ್ರಗತಿಯಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಹಂತವು ಅತಿ ಮುಖ್ಯವಾಗಿದ್ದು ಮಕ್ಕಳಿಗೆ ಉತ್ತಮ ವಾತಾವರಣ ಮತ್ತು ಗುಣಾತ್ಮಕ ಶಿಕ್ಷಣ ಸಿಗುವ ನಿಟ್ಟಿನಲ್ಲಿ ಯೋಚಿಸಿ ಬಾಡಿಗೆ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಅಂಗನವಾಡಿಗಳು ಸ್ವಂತ ಕಟ್ಟಡ ಹೊಂದುವ ನಿಟ್ಟಿನಲ್ಲಿ ಮೇಲಧಿಕಾರಿಗಳೊಂದಿಗೆ ಸಮನ್ವಯ ನಡೆಸಿ ಜಾಗ ಗುರುತಿಸಿ ಖರೀದಿಸುವ ಪ್ರಕ್ರಿಯೆ ನಡೆಸಲು ಕ್ರಮ ವಹಿಸಬೇಕು ಎಂದು ಶಾಸಕರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ನಿರ್ದೇಶನ ನೀಡಿದರು.

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿಕಾರಿಗಳು ಸಾರ್ವಜನಿಕರಿಗೆ ಸರಿಯಾದ ಮಾಹಿತಿ ನೀಡಬೇಕು. ಯೋಜನೆಗಳ ಉದ್ದೇಶ ಮತ್ತು ಪ್ರಯೋಜನೆಗಳ ಬಗ್ಗೆ ತಿಳಿಸಿ ಅರ್ಹ ಫಲಾನುಭವಿಗಳಿಗೆ ಯೋಜನೆಗಳಿಂದ ಅನುಕೂಲವಾಗುವಂತೆ ಕಾಳಜಿ ವಹಿಸಬೇಕು ಎಂದು ಶಾಸಕರು ಇದೆ ವೇಳೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

ಹೊಸಪೇಟೆ ತಾಲೂಕಿನಲ್ಲಿ ಬಿಪಿಎಲ್ ಕಾರ್ಡು ಹೊಂದಿದ ಒಟ್ಟು 72,784 ಕುಟುಂಬಗಳ ಪೈಕಿ ಆನ್‌ಲೈನದಲ್ಲಿ 65,147 ಫಲಾನುಭವಿಗಳು ನೋಂದಾಯಿಸಿದ್ದು ಈ ಪೈಕಿ 63,952 ಫಲಾನುಭವಿಗಳಿಗೆ ಗೃಹಲಕ್ಷಿö್ಮ ಯೋಜನೆಯ ಹಣ ಬಂದಿರುತ್ತದೆ. ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಆಗದ ಕಾರಣ ಮತ್ತು ಎನ್‌ಪಿಸಿಐ ಮ್ಯಾಪ್ ಆಗದ ತಾಂತ್ರಿಕ ಕಾರಣಗಳಿಂದ 1195 ಫಲಾನುಭವಿಗಳಿಗೆ ಹಣ ತಲುಪಿಲ್ಲ. ಈ ತಾಂತ್ರಿಕ ತೊಂದರೆಯನ್ನು ಸರಿಪಡಿಸಿ ಬಾಕಿ ಫಲಾನುಭವಿಗಳಿಗೂ ಸಹ ಹಣ ತಲುಪುವ ವ್ಯವಸ್ಥೆ ಮಾಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ, ಪಶು ಸಂಗೋಪನೆ, ಸಮಾಜ ಕಲ್ಯಾಣ ಇಲಾಖೆ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಕೈಗಾರಿಕಾ, ಕಾರ್ಮಿಕ, ಪ್ರವಾಸೋದ್ಯಮ, ಸಹಕಾರ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿಯನ್ನು ಶಾಸಕರು ಪರಿಶೀಲಿಸಿದರು.

ಸಭೆಯಲ್ಲಿ ನಾಮ ನಿರ್ದೇಶಿತ ಸದಸ್ಯರಾದ ಎಸ್ ಯರಿಸ್ವಾಮಿ, ಮಂಗಳಗೌರಿ ಎಸ್ ಲಲಿತಕುಮಾರ, ಕೆ.ದಿವಾಕರ, ಇ ಚಂದ್ರಶೇಖರ, ಮೊಹಮ್ಮದ್ ಖಾಲೀದ್ ಕೆ., ಪಿ.ಜಾನಕಿರಾಮ ಹಾಗೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಹರೀಶ್ ಆರ್., ತಹಸೀಲ್ದಾರರಾದ ವಿಶ್ವಜಿತ್ ಮೆಹತಾ ಮತ್ತು ವಿವಿಧ ಇಲಾಖೆಗಳ ತಾಲೂಕುಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!