ಮುಖ್ಯಮಂತ್ರಿಗಳಿಂದ ಅಹ್ವಾಲು ಸ್ವೀಕಾರ
ಕರುನಾಡ ಬೆಳಗು ಸುದ್ದಿ
ವಿಜಯನಗರ, 21- ಜಿಲ್ಲೆಯಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಯುತ್ತಿದ್ದು.
ಮುಖ್ಯಮಂತ್ರಿ ಸಿದ್ದರಾಮಯ್ಯ 11:30ಕ್ಕೆ ಜಿಲ್ಲಾಡಳಿತ ಕಛೇರಿಗೆ ಆಗಮಿಸುತ್ತಿದ್ದಂತೆ ಅವರನ್ನು ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ಇಲಾಖೆ ಸ್ವಾಗತಿಸಿದರು, ಜಿಲ್ಲಾಡಳಿತ ಕಛೇರಿ ಆವರಣದಲ್ಲಿ ಅರ್ಜಿಗಳನ್ನು ಹಿಡಿದು ನಿಂತಿದ್ದ ರೈತರ ಮತ್ತು ಸಾರ್ವಜನಿಕರ ಮತ್ತು ವಿವಿಧ ಸಂಘಟನೆಯವರಿಂದ ಸಮಸ್ಯೆಗಳನ್ನು ಆಲಿಸಿ ಮನವಿ ಪತ್ರಗಳನ್ನು ಸ್ವೀಕರಿಸಿದರು. ಈ ಸಂಧರ್ಭದಲ್ಲಿ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಇಲಾಖೆಯಿಂದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ , ವೀಲ್ ಚೇರ್, ಮಹಿಳಾ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್, ಹೊಲಿಗೆಯಂತ್ರಗಳನ್ನು ವಿತರಿಸಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಬಿ ಜೆಡ್ ಜಮೀರ್ ಅಹ್ಮದ್ ಖಾನ್, ಶಾಸಕ ಹೆಚ್. ಆರ್. ಗವಿಯಪ್ಪ, ವಿವಿಧ ವಿಧಾನಸಭಾ ಮತಕ್ಷೇತ್ರಗಳ ಶಾಸಕರು ಮತ್ತು ಜಿಲ್ಲಾಧಿಕಾರಿ ಎಂ. ಎಸ್. ದಿವಾಕರ, ಅಪರ ಜಿಲ್ಲಾಧಿಕಾರಿಗಳಾದ ಅನುರಾಧ ಜಿ, ಸಹಾಯಕ ಆಯುಕ್ತರಾದ ಮೊಹಮ್ಮದ್ ಅಲಿ ಅಕ್ರಮ ಷಾಹ, ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಲೀಂ ಪಾಶಾ, ಜಿಪಂ ಮುಖ್ಯ ಯೋಜನಾಧಿಕಾರಿ ಅನ್ನದಾನಸ್ವಾಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಶ್ವೇತಾ, ಜಿಲ್ಲಾ ಜೆ.ಎಂ, ತಹಸೀಲ್ದಾರರು, ತಾಪಂ ಇಓಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.
