2c136fae-be38-4577-97e1-318669006cc9

ಕುಷ್ಟಗಿ ಪುರಸಭೆ : ನಗರ ಕಲಿಕಾ ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 24- ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಡೇ ನಲ್ಮ್ ಅಭಿಯಾನ ಮತ್ತು ಪಿ.ಎಂ ಸ್ವನಿಧಿ ಯೋಜನೆ ಅಡಿಯಲ್ಲಿ ನಗರ ಕಲಿಕಾ ಮತ್ತು ಪ್ರಾಯೋಗಿಕ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕಲಿಕಾ ಮತ್ತು ಪ್ರಾಯೋಗಿಕ (ಟಿ.ಯು.ಎಲ್.ಐ.ಪಿ- ದ ಅರ್ಬನ್ ಲರ್ನಿಂಗ್ ಇಂಟರ್ನ್ಶಿಪ್ ಪ್ರೋಗ್ರಾಂ) ತರಬೇತಿ ಕಾರ್ಯಕ್ರಮವನ್ನು 2023-24ನೇ ಸಾಲಿಗೆ ಅನುಷ್ಠಾನಗೊಳಿಸಲು ಸರಕಾರದಿಂದ 05 ಗುರಿಗಳನ್ನು ನಿಗದಿ ಪಡಿಸಲಾಗಿದ್ದು, ಬೀದಿ ಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡುವುದು, ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶ ಕಲ್ಪಿಸಿ ಕೊಡುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ.

ಆದ್ದರಿಂದ ಕುಷ್ಟಗಿ ಪುರಸಭೆ ವ್ಯಾಪ್ತಿಯ ಡಿಪ್ಲೋಮಾ, ಪದವಿ, ಸ್ನಾತಕೋತ್ತರ ಪದವಿಯಲ್ಲಿ ಉತ್ತೀರ್ಣರಾದ ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ ಜುಲೈ 08 ರೊಳಗಾಗಿ ಕೇಂದ್ರ ಸರ್ಕಾರದ ವೆಬ್‌ಸೈಟ್ Ministry of Housing and Urban Affairs ನಲ್ಲ್ಲಿ https://internship.aicte-india.org/module_ulb/Dashboard/TulipMain/ ರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿ ಅರ್ಜಿ ಸಲ್ಲಿಸುವಂತೆ ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ :

ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಡೇ ನಲ್ಮ್ ವಿಭಾಗದಿಂದ ವಿವಿಧ ಘಟಕವಾರು ಸಾಲ ಸೌಲಭ್ಯ ನೀಡಲಾಗುತ್ತಿದ್ದು, ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಸ್ವ ಸಹಾಯ ಗುಂಪು ರಚನೆ, ಸ್ವ ಸಹಾಯ ಗುಂಪುಗಳಿಗೆ ಕ್ರೆಡಿಟ್ ಲಿಂಕೇಜ್ ಸಾಲ ಸೌಲಭ್ಯ, ಸ್ವಯಂ ಉದ್ಯೋಗಕ್ಕಾಗಿ ವ್ಯಾಪಾರಸ್ಥರಿಗೆ ಸಾಲ ಸೌಲಭ್ಯ, ಪ್ರದೇಶ ಮಟ್ಟದ ಒಕ್ಕೂಟ ರಚನೆ ಗಾಗಿ ಪುರಸಭೆ ವತಿಯಿಂದ ಸಾಲ ಸೌಲಭ್ಯ ನೀಡಲಾಗುತ್ತದೆ.

ಅರ್ಹ ಫಲಾನುಭವಿಗಳು ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್, ಗುಂಪಿನ ಸ್ವವಿವರ ಮಾಹಿತಿ, ಭಾವಚಿತ್ರಗಳೊಮದಿಗೆ ಅರ್ಜಿಯನ್ನು ದ್ವಿಪ್ರತಿಯಲ್ಲಿ ಪುರಸಭೆ ಕಾರ್ಯಾಲಯಕ್ಕೆ ಜುಲೈ 08 ರೊಳಗಾಗಿ ಸಲ್ಲಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!