2c136fae-be38-4577-97e1-318669006cc9

ಕುಕನೂರು ಪ.ಪಂ : ಟುಲಿಪ್ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 25- ಕುಕನೂರ ಪಟ್ಟಣ ಪಂಚಾಯತಿಯ ವ್ಯಾಪ್ತಿಯ ಡಿಪ್ಲೋಮಾ/ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಡೇ ನಲ್ಮ ಅಭಿಯಾನ ಮತು ಪಿ.ಎಂ ಸ್ವನಿಧಿ ಯೋಜನೆ ಅಡಿಯಲ್ಲಿ ಪಟ್ಟಣ ಕಲಿಕಾ ಮತ್ತು ಪ್ರಾಯೋಗಿಕ ತರಬೇತಿ ಕಾರ್ಯಕ್ರಮ (TULIP: The Urban Learning Internship Programme) ವನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

2023-24 ನೇ ಸಾಲಿಗೆ ಅನುಷ್ಠಾನಗೊಳಿಸಲು ಸರ್ಕಾರದಿಂದ 02 ಗುರಿಯನ್ನು ಹಾಗೂ ಸನ್ 2024-25ನೇ ಸಾಲಿಗೆ 03 ಗುರಿಯನ್ನು ನಿಗದಿಪಡಿಸಿದ್ದು, ಬೀದಿ ಬದಿ ವ್ಯಾಪಾರಿಗಳ ಕುರಿತು ಅಧ್ಯಯನ ಮಾಡಿ, ಜ್ಞಾನ ಮತ್ತು ಕೌಶಲ್ಯ ವೃದ್ಧಿಸಿಕೊಳ್ಳಲು ಅವಕಾಶವನ್ನು ಕಲ್ಪಿಸಿ ಕೊಡುವುದು ಈ ತರಬೇತಿಯ ಪ್ರಮುಖ ಉದ್ದೇಶವಾಗಿದೆ.

ಆದ್ದರಿಂದ ಡಿಪ್ಲೋಮಾ/ಪದವಿ/ಸ್ನಾತಕೋತ್ತರ ಪದವಿ ಉತ್ತೀರ್ಣರಾದ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿಗಳೊಂದಿಗೆ ಜುಲೈ 18 ರೊಳಗಾಗಿ ಸರ್ಕಾರದ ವೆಬ್ ಸೈಟ್ [Ministry of Housing and Urban Affairs https;//internship.aicte-indIa.org/module ulb/Dashboard/TulipMain/ ರ ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊAಡು ಅರ್ಜಿ ಸಲ್ಲಿಸಬಹುದು ಎಂದು ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!