ಸೈಕಲ್ ಮೇಲೆ ಸಂಚರಿಸಿ ಸಾರ್ವಜನಿಕರ ಅಹವಾಲು ಆಲಿಸಿದ ಜಿಲ್ಲಾಧಿಕಾರಿಗಳು
ಕರುನಾಡ ಬೆಳಗು ಸುದ್ದಿ
ವಿಜಯನಗರ, 26- ಜಿಲ್ಲಾಧಿಕಾರಿಗಳಾದ ಎಂ.ಎಸ್.ದಿವಾಕರ ಅವರು ಜೂನ್ 26ರಂದು ಕೂಡ್ಲಿಗಿ ತಾಲೂಕಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಆಲಿಸಿದರು.
ಜಿಲ್ಲಾಧಿಕಾರಿಗಳು ಸೈಕಲ್ ಮೇಲೇರಿ ನಗರದ ವಿವಿಧೆಡೆ ಸಂಚರಿಸಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದ್ದು ವಿಶೇಷವಾಗಿತ್ತು.
ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್‌ನಿAದ ಕೂಡ್ಲಿಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಎನ್.ಟಿ.ಶ್ರೀನಿವಾಸ್ ಅವರ ಸಮ್ಮುಖದಲ್ಲಿ ಜಿಲ್ಲಾಧಿಕಾರಿಗಳು ಸಾರ್ವಜನಿಕರ ಅಹವಾಲು ಆಲಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು ಬಿ, ಉಪ ವಿಭಾಗಧಿಕಾರಿ ಮಹಮ್ಮದ್ ಅಲಿ ಅಕ್ರಂ ಷಾಹ, ತಹಸೀಲ್ದಾರರಾದ ರೇಣುಕಮ್ಮ ಮತ್ತು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ ಅವರು ಜಿಲ್ಲಾಧಿಕಾರಿಗಳ ಜೊತೆಗೆ ಅರ್ಜಿಗಳನ್ನು ಪರಿಶೀಲಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಹೆಚ್.ಎಸ್., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಮಚಂದ್ರಪ್ಪ, ಆಹಾರ ಇಲಾಖೆಯ ಉಪ ನಿರ್ದೇಶಕರಾದ ಮಲ್ಲಿಕಾರ್ಜುನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶ್ವೇತಾ, ಪಶುಪಾಲನಾ ಇಲಾಖೆಯ ಉಪ ನಿರ್ದೇಶಕರಾದ ಸೋಮಸಿಂಗ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಗುಡ್ಡಪ್ಪ, ಜಿಲ್ಲಾ ಕಾರ್ಮಿಕ ಅಧಿಕಾರಿ ಸೂರಪ್ಪ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಹಾಜರಿದ್ದು ಜಿಲ್ಲಾಧಿಕಾರಿಗಳ ಸೂಚನೆಯಂತೆ ಅರ್ಜಿಗಳ ಬಗ್ಗೆ ಸ್ಥಳದಲ್ಲಿಯೇ ಪರಿಶೀಲಿಸಿ ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕಂದಾಯ ಇಲಾಖೆಗೆ ಅತೀ ಹೆಚ್ಚು 89 ಅರ್ಜಿಗಳು ಸ್ಚೀಕೃತವಾದವು. ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಗೆ 24, ಆಹಾರ ಇಲಾಖೆ 15, ಜೆಸ್ಕಾಂ ಮತ್ತು ಶಿಕ್ಷಣ ಇಲಾಖೆಗೆ ತಲಾ 10, ತೋಟಗಾರಿಕೆ ಇಲಾಖೆ, ಪೊಲೀಸ್ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ಭೂಮಾಪಾನ ಇಲಾಖೆ, ಸಾರಿಗೆ ಇಲಾಖೆಗಳಿಗೆ ತಲಾ 3, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಲೋಕೋಪಯೋಗಿ ಇಲಾಖೆ, ಪಶುಸಂಗೋಪನೆ ಇಲಾಖೆಗಳಿಗೆ ತಲಾ 2, ಆರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ತಲಾ 1 ಅರ್ಜಿಗಳು ಸ್ವೀಕೃತವಾದವು. ಜಿಲ್ಲಾಧಿಕಾರಿಗಳು ಜಿಲ್ಲಾಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅರ್ಜಿಗಳನ್ನು ಪರಿಶೀಲಿಸಿದರು.
ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಜನತಾ ದರ್ಶನದಲ್ಲಿ ಅರ್ಜಿಗಳ ಸ್ವೀಕೃತಿಗೆ ವಿವಿಧ ಇಲಾಖೆಗಳಿಂದ ಅಗತ್ಯ ವ್ಯವಸ್ಥೆ ಮಾಡಲಾಗಿತ್ತು. ಕೃಷಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆಹಾರ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಜೆಸ್ಕಾಂ, ಪಂಚಾಯತ್ ರಾಜ್ಯ ಎಂಜಿನಿಯರಿAಗ್ ಇಲಾಖೆ, ಲೋಕೋಪಯೋಗಿ ಇಲಾಖೆ, ತಾಲೂಕು ಪಂಚಾಯತ್, ಸಿಡಿಪಿಓ ಕಚೇರಿ, ಮೀನುಗಾರಿಕೆ ಇಲಾಖೆ, ಪ್ರಾದೇಶಿಕ ಸಾರಿಗೆ ಇಲಾಖೆ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಸಣ್ಣ ನೀರಾವರಿ ಮತ್ತು ಅಂತರ್ಜಲ ಇಲಾಖೆ, ಪುರಸಭೆ ಕಾರ್ಯಾಲಯ, ಸಾರಿಗೆ ಇಲಾಖೆ, ಅಬಕಾರಿ ಇಲಾಖೆ, ಪಶುಪಾಲನಾ ಇಲಾಖೆ, ಸರ್ವೆ ಇಲಾಖೆ, ಕೆಆರ್‌ಐಡಿಎಲ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದು ಸಾರ್ವಜನಿಕರಿಂದ ಅರ್ಜಿಗಳನ್ನು ಪಡೆದುಕೊಂಡರು.
ನಾನಾ ಸೌಲಭ್ಯ ವಿತರಣೆ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ವಿವಿಧ ಯೋಜನೆಯಡಿ 37 ತ್ರಿಚಕ್ರ ವಾಹನ ವಿತರಿಸಲಾಯಿತು. 2 ಲ್ಯಾಪ್ ಟಾಪ್ , 1 ಬ್ಯಾಟರಿ ವೀಲ್ ಚೇರ್ , 2 ಬ್ರೈಲ್ ಕಿಟ್ , 1 ಹೊಲಿಗೆ ಯಂತ್ರ ಸೇರಿ ಒಟ್ಟು 49 ಫಲಾನುಭವಿಗಳಿಗೆ ಇದೆ ವೇಳೆ ಸರ್ಕಾರದ ಸವಲತ್ತು ವಿತರಿಸಲಾಯಿತು.
ಕಾರ್ಯಕ್ರಮಗಳಿಗೆ ಚಾಲನೆ: 1 ವರ್ಷದಿಂದ 5 ವರ್ಷದೊಳಗಿನ ಮಕ್ಕಳಿಗೆ ಜೂನ್ 26 ರಿಂದ 10 ದಿನಗಳ ಕಾಲ ವಿಟಮಿನ್ ಎ ಲಸಿಕೆ ನೀಡುವ ಕಾರ್ಯಕ್ರಮಕ್ಕೆ ಮತ್ತು ಕೃಷಿ ಇಲಾಖೆಯಿಂದ ರೈತರಲ್ಲಿ ಕೃಷಿ ವಿಮೆ ಬಗ್ಗೆ ಜಾಗೃತಿ ಮೂಡಿಸಲು ಸಂಚರಿಸಲಿರುವ ಜಾಗೃತಿ ವಾಹನಕ್ಕೆ ಜಿಲ್ಲಾಧಿಕಾರಿಗಳು ಚಾಲನೆ ನೀಡಿದರು.
ಜನಸ್ಪಂದನ ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಮಟ್ಟದ ಪಿಡಿಓಗಳು, ಗ್ರಾಮ ಆಡಳಿತ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

