ಅಬಕಾರಿ ಸಚಿವರಿಗೆ ವಿಕಲಚೇತನ ನೌಕರರ ಸಂಘದಿಂದ ಸನ್ಮಾನ
ಕರುನಾಡ ಬೆಳಗು ಸುದ್ದಿ
ಕೊಪ್ಪಳ, ೦೯- ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರಿಗೆ ವಿಕಲಚೇತನ ನೌಕರರ ಸಂಘದ ವತಿಯಿಂದ ಬುಧವಾರ ಸಂಜೆ ನಗರದ ಪ್ರವಾಸಿ ಮಂದಿರದಲ್ಲಿ ಕಿನ್ನಾಳ ಕಲೆಯ ನೆನಪಿನ ಕಾಣಿಕೆ ನೀಡುವುದರ ಮೂಲಕ ಸನ್ಮಾನ ಮಾಡಲಾಯಿತು.
ಈ ಸಮಯದಲ್ಲಿ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ,ರಾಜ್ಯ ಖಜಾಂಚಿ ಮಂಜುನಾಥ ಹಿಂಡಿಹುಳ್ಳಿ,ತಾಲೂಕ ಅಧ್ಯಕ್ಷರಾದ ಅಂದಪ್ಪ ಇದ್ಲಿ,ಮಾಜಿ ಜಿಲ್ಲಾ ಪಂಚಾಯತ ಸದಸ್ಯರಾದ ಗೂ|ಳಪ್ಪ ಹಲಗೇರಿ,ಗಾಳೇಪ್ಪ ಪೂಜಾರ,ಮಲ್ಲೂ ಪೂಜಾರ,ಪರಶುರಾಮ ಕೆರಳ್ಳಿ ಸೇರಿದಂತೆ ಅನೇಕರು ಹಾಜರಿದ್ದರು.
ಪೋಟೊ: ಅಬಕಾರಿ ಸಚಿವರಾದ ಆರ್.ಬಿ.ತಿಮ್ಮಾಪುರ ಅವರನ್ನು ವಿಕಲಚೇತನ ನೌಕರರ ಸಂಘದ ವತಿಯಿಂದ ಸನ್ಮಾನಿಸಲಾಯಿತು.
