2c136fae-be38-4577-97e1-318669006cc9

ಕೊಪ್ಪಳ : ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಪ್ರವಾಸ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 6- ಗೌರವಾನ್ವಿತ ಕೊಪ್ಪಳ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರು ಆಗಿರುವ ಹಾಗೂ ಹೈಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಜಿ.ಎಸ್.ಕಮಲ್ ಅವರು ಜುಲೈ 6ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ.

ಅಂದು ಬೆಳಗ್ಗೆ 7 ಗಂಟೆಗೆ ಧಾರವಾಡದಿಂದ ರಸ್ತೆ ಮಾರ್ಗವಾಗಿ ಹೊರಟು ಬೆಳಗ್ಗೆ 9.30ಕ್ಕೆ ಕೊಪ್ಪಳ ನಗರಕ್ಕೆ ಆಗಮಿಸುವರು. ಬಳಿಕ ಬೆಳಗ್ಗೆ 10.45ಕ್ಕೆ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಆರೋಗ್ಯ ಕೇಂದ್ರವನ್ನು ಉದ್ಘಾಟಿಸುವರು.

ಬಳಿಕ 11 ಗಂಟೆಗೆ ಬಾರ್ ಅಸೋಸಿಯೇಶನ್ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಮಧ್ಯಾಹ್ನ 12 ಗಂಟೆಗೆ ನ್ಯಾಯಾಂಗ ಇಲಾಖೆಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಸಂಜೆ 4 ಗಂಟೆಗೆ ಕೊಪ್ಪಳ ನಗರದಿಂದ ನಿರ್ಗಮಿಸಿ ಧಾರವಾಡ ಜಿಲ್ಲೆಯತ್ತ ಪ್ರಯಾಣ ಬೆಳೆಸುವರು.

Leave a Reply

Your email address will not be published. Required fields are marked *

error: Content is protected !!