WhatsApp Image 2024-07-09 at 3.34.53 PM

ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾಗಿ ಟಿ.ಎಂ.ಚಂದ್ರಶೇಖರಯ್ಯ ಸ್ವಾಮಿ ಆಯ್ಕೆ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 9- ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಟಿ ಎಂ ಚಂದ್ರಶೇಖರಯ್ಯ ಸ್ವಾಮಿ ಅವರನ್ನು ಬಳ್ಳಾರಿ ಜಿಲ್ಲಾ ಕೋ ಆಪರೇಟಿವ್ ಕೇಂದ್ರ ಬ್ಯಾಂಕ್ (ಬಿಡಿಸಿಸಿ ಬ್ಯಾಂಕ್) ನ ಸರ್ಕಾರ ನಾಮ ನಿರ್ದೇಶಕರಾಗಿ ಆಯ್ಕೆ ಮಾಡಿದ್ದಕ್ಕೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕ ಬಿ.ಎಂ.ನಾಗರಾಜ ಅವರು ಶಾಸಕರ ಗೃಹ ಕಚೇರಿಯಲ್ಲಿ ಟಿ ಎಂ ಚಂದ್ರಶೇಖರಯ್ಯ ಸ್ವಾಮಿ ಅವರಿಗೆ ದೊರೆತ ಗೌರವಕ್ಕೆ ಸನ್ಮಾನಿಸಿ ಶುಭ ಹಾರೈಸಿ ಅಭಿನಂದಿಸಿದರು.

ಬ್ಲಾಕ್ ಕಾಂಗ್ರೆಸ್ ತಾಲೂಕು ಅಧ್ಯಕ್ಷ ಎನ್ ಕರಿಬಸಪ್ಪ ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಎಂ ಗೋಪಾಲ ರೆಡ್ಡಿ ಚಿಕ್ಕಬಳ್ಳಾರಿ ಶ್ರೀನಿವಾಸ ರೆಡ್ಡಿ ಸೂಗನಗೌಡ ಮತ್ತಿತರರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

error: Content is protected !!