WhatsApp Image 2024-07-11 at 5.47.12 PM

ಸಿರುಗುಪ್ಪ : ವಿಶ್ವ ಜನಸಂಖ್ಯಾ ದಿನಾಚರಣೆ

ಕರುನಾಡ ಬೆಳಗು ಸುದ್ದಿ

ಸಿರುಗುಪ್ಪ, 11- ಜಿಲ್ಲಾ ಆಡಳಿತ ಜಿಲ್ಲಾ ಪಂಚಾಯತ್ ಬಳ್ಳಾರಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆ ಬಳ್ಳಾರಿ ತಾಲೂಕ ಆರೋಗ್ಯ ಅಧಿಕಾರಿಗಳ ಕಚೇರಿ ಸಿರುಗುಪ್ಪ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮವನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿರುಗುಪ್ಪದಲ್ಲಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ತಾಲೂಕು ಆರೋಗ್ಯ ಅಧಿಕಾರಿ ಡಾಕ್ಟರು ಬಿ ಈರಣ್ಣರವರು ಜನಸಂಖ್ಯಾ ಸ್ಪೋಟ ಜಾಗತಿಕ ಸಮಸ್ಯೆಯಾಗಿದೆ ಇದನ್ನು ನಿಯಂತ್ರಿಸುವಲ್ಲಿ ಎಲ್ಲರೂ ಸಹಕರಿಸಬೇಕು ವಿಶೇಷವಾಗಿ ವಿದ್ಯಾರ್ಥಿಗಳು ತಾವು ಅರ್ಥ ಮಾಡಿಕೊಂಡು ಜನರಲ್ಲಿ ಜಾಗೃತಿ ಮೂಡಿಸಬೇಕು.

ಕ್ಷೇತ್ರ ಶಿಕ್ಷಣಾಧಿಕಾರಿ ಮೊಹಮ್ಮದ್ ಖಾಸಿಂ ರವರು ಜನಸಂಖ್ಯಾ ಸ್ಪೋಟಕ್ಕೆ ಕಾರಣಗಳು. ದುಷ್ಪರಿಣಾಮಗಳು ಮತ್ತು ನಿಯಂತ್ರಣ ವಿಧಾನಗಳಾದ ಶಾಶ್ವತ ಹಾಗೂ ತಾತ್ಕಾಲಿಕ ಕುಟುಂಬ ಕಲ್ಯಾಣ ಯೋಜನ ವಿಧಾನಗಳ ಕುರಿತು ಮಾಹಿತಿ ನೀಡಿದರು.

ಕೆ ಚಂದ್ರಕಾಂತ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಹಾಗೂ ಉಪನ್ಯಾಸಕ ಬಳಗ ಮತ್ತು ತಾಲೂಕು ಹಿರಿಯ ಆರೋಗ್ಯ ಕ್ಷೇತ್ರ ಕಾರ್ಯಕ್ರಮ ವ್ಯವಸ್ಥಾಪಕ ಪ್ರಹಲ್ಲಾದ್ ಚಂದ್ರಶೇಖರ್ಸಮುದಾಯ ಆರೋಗ್ಯ ಅಧಿಕಾರಿ ರೇಣುಕಮ್ಮ ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸದಸ್ಯ ಜನಾಭಿಪ್ರಾಯ ಮುಖಂಡ ಅಬ್ದುಲ್ ನಬಿ ಆಶಾ ಕಾರ್ಯಕರ್ತೆಯರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು ನಂತರ ಚಿಕ್ಕ ಸಂಸಾರ-ಚೊಕ್ಕ ಶಿಕ್ಷಣ ಮೊದಲು- ನಂತರ ಮದುವೆ ಕುಟುಂಬ ನಿಯಂತ್ರಣಕ್ಕೆ ತಾತ್ಕಾಲಿಕ ವಿಧಾನ ಬಳಿಸಿ ಎಂಬ ಘೋಷಣೆಗಳೊಂದಿಗೆ ಜಾಥಾ ಜಾಗೃತಿ ಮೂಡಿಸಲಾಯಿತು.

Leave a Reply

Your email address will not be published. Required fields are marked *

error: Content is protected !!