2c136fae-be38-4577-97e1-318669006cc9

ಜಿಟಿಟಿಸಿ : ಡಿಪ್ಲೋಮಾ ಕೋರ್ಸುಗಳಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಕೊಪ್ಪಳ ಜಿಲ್ಲೆಯಲ್ಲಿ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಿಂದ 2024-25ನೇ ಸಾಲಿಗೆ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗಾಗಿ ಡಿಪ್ಲೋಮಾ ಕೋರ್ಸುಗಳಿಗೆ ಆಫ್‌ಲೈನ್ ಮುಖಾಂತರ ಅರ್ಜಿ ಸಲ್ಲಿಕೆ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.

ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ 3+1 ಅವಧಿಯ ಡಿಪ್ಲೋಮಾ ಇನ್ ಎಲೆಕ್ಟಾçನಿಕ್ಸ್ ಅಂಡ್ ಕಮ್ಯುನಿಕೇಶನ್ ಹಾಗೂ ಡಿಪ್ಲೋಮಾ ಇನ್ ಮೆಕ್ಯಾಟ್ರಾನಿಕ್ಸ್ (ಡಿಎಂಸಿಹೆಚ್) ಡಿಪ್ಲೋಮಾ ಕೋರ್ಸುಗಳ ಪ್ರವೇಶಕ್ಕೆ ಮೊದಲು ಬಂದವರಿಗೆ ಮೊದಲ ಆದ್ಯತೆ ಮೇರೆಗೆ ಪ್ರವೇಶಾತಿ ಪ್ರಕ್ರಿಯೆಯನ್ನು ಜಿಟಿಟಿಸಿ ಕೇಂದ್ರದಲ್ಲಿ ಆರಂಭಿಸಲಾಗಿದೆ. ಆಸಕ್ತರು ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್ ದದೇಗಲ್, ಕೊಪ್ಪಳ ಇಲ್ಲಿ ಖುದ್ದಾಗಿ ಬಂದು ಅರ್ಜಿಯನ್ನು ಭರ್ತಿ ಮಾಡಿ ಜುಲೈ 31ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು, ಇವರ ದೂ.ಸಂ: 750704445, 9986088894 ಗೆ ಸಂಪರ್ಕಿಸಬಹುದು ಎಂದು ಜಿಟಿಟಿಸಿ ವಿಭಾಗದ ಮುಖ್ಯಸ್ಥರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!