ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಭಾಗೀದಾರರೊಂದಿಗೆ ಸಭೆ (1)

ಎಲ್ಲ ವಸತಿ ನಿಲಯ, ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು : ಶೇಖರಗೌಡ ಜಿ.ರಾಮತ್ನಾಳ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 12- ಜಿಲ್ಲೆಯ ಎಲ್ಲ ವಿದ್ಯಾರ್ಥಿ ವಸತಿ ನಿಲಯಗಳಲ್ಲಿ, ಬಾಲಮಂದಿರಗಳಲ್ಲಿ ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನ್ನು ಕಡ್ಡಾಯವಾಗಿ ಅಳವಡಿಸಿಕೊಂಡು, ನಿಯಮಾನುಸಾರ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ.ರಾಮತ್ನಾಳ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಇವರ ಸಹಯೋಗದಲ್ಲಿ ಶುಕ್ರವಾರದಂದು ಜಿಲ್ಲಾ ಪಂಚಾಯತಿಯ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಆಯೋಜಿಸಿದ್ದ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಭಾಗೀದಾರರೊಂದಿಗೆ ಸಮಾಲೋಚನೆ ಮತ್ತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮಕ್ಕಳ ರಕ್ಷಣಾ ನೀತಿ-2016 ರಲ್ಲಿ ಮಕ್ಕಳಿಗೆ ಒದಗಿಸಬೇಕಾದ ಅಗತ್ಯ ಮೂಲಭೂತ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಆದ್ದರಿಂದ ಜಿಲ್ಲೆಯ ಎಲ್ಲ ವಸತಿ ನಿಲಯ, ವಸತಿ ಶಾಲೆ, ಶೈಕ್ಷಣಿಕ ಸಂಸ್ಥೆಗಳು, ಬಾಲಮಂದಿರಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಆ ಮೂಲಕ ನೀತಿಯನ್ವಯ ಎಲ್ಲ ಸೌಲಭ್ಯವನ್ನು ಮಕ್ಕಳಿಗೆ ಒದಗಿಸಬೇಕು. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿಗಳು ನೀತಿಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಿ, ಪಾಲಿಸುತ್ತೇವೆ ಎಂಬುದಾಗಿ ಬದ್ಧತಾ ಪತ್ರಕ್ಕೆ ಸಹಿ ಹಾಕಬೇಕು ಎಂದು ಸದಸ್ಯರು ಅಧಿಕಾರಿಗಳಿಗೆ ಸೂಚಿಸಿದರು.

ಎಲ್ಲ ವಸತಿ ನಿಲಯಗಳಲ್ಲಿ ಸಲಹಾ ಪೆಟ್ಟಿಗೆ ಇಡಬೇಕು. ಊಟದ ಕೋಣೆ, ಸ್ಟಡಿ ರೂಂಗೆ ಹೋಗುವ ಮಾರ್ಗ, ಶೌಚಾಲಯ, ಸ್ನಾನಗೃಹಕ್ಕೆ ಹೋಗುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಬೇಕು. ವಸತಿ ನಿಲಯದ ವಿದ್ಯಾರ್ಥಿಗಳು ಸಲಹಾ ಪೆಟ್ಟಿಗೆಯಲ್ಲಿ ತಮ್ಮ ದೂರು, ಸಲಹೆಗಳನ್ನು ಹಾಕುವಂತೆ ಸೂಚಿಸಬೇಕು. ಯಾವುದೇ ಕಾರಣಕ್ಕೂ ವಸತಿ ನಿಲಯದ ವಾರ್ಡನ್‌ಗಳು ಸಲಹಾ ಪೆಟ್ಟಿಗೆಯನ್ನು ತೆರೆದು ನೋಡುವಂತಿಲ್ಲ. ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಮಹಿಳಾ ವಸತಿ ನಿಲಯ ಪಾಲಕರು ಇರಬೇಕು. ಈ ಎಲ್ಲ ಕ್ರಮಗಳ ಬಗ್ಗೆ ಹಾಗೂ ಮಕ್ಕಳ ರಕ್ಷಣಾ ನೀತಿ-2016 ಅನ್ನು ಅಳವಡಿಸಿಕೊಂಡ ಬಗ್ಗೆ ಸಂಬAಧಿಸಿದ ಇಲಾಖೆಗಳ ಅಧಿಕಾರಿಗಳು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗೆ ವರದಿಯನ್ನು ಸಲ್ಲಿಸಬೇಕು. ಇಲಾಖೆಗಳ ಅಧಿಕಾರಿಗಳು ನಿಯಮಿತವಾಗಿ ವಸತಿ ನಿಲಯ, ವಸತಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕು. ಪ್ರಸ್ತುತ ಡೆಂಗ್ಯೂ ಜ್ವರ ತೀವ್ರತೆ ಪಡೆಯುತ್ತಿದ್ದು, ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ವಸತಿ ನಿಲಯ, ವಸತಿ ಶಾಲೆ, ಇತರೆ ಶೈಕ್ಷಣಿಕ ಸಂಸ್ಥೆಗಳು, ಅಂಗನವಾಡಿಗಳ ಸುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ಇಟ್ಟುಕೊಂಡು, ಚರಂಡಿ ಅಥವಾ ನೀರು ಸಂಗ್ರಾಹಕಗಳಿದ್ದಲ್ಲಿ ಸ್ಥಳೀಯ ಸಂಸ್ಥೆಗಳ ಮೂಲಕ ಸೊಳ್ಳೆ ನಿರೋಧಕ ಸ್ಪೆçÃಗಳನ್ನು ಮಾಡಿಸಬೇಕು ಎಂದು ಅವರು ಅಧಿಕಾರಿಗಳಿಗೆ ತಿಳಿಸಿದರು.

ವಿದ್ಯಾರ್ಥಿಗಳ ವಸತಿ ನಿಲಯ ಹಾಗೂ ವಸತಿ ಶಾಲೆಗಳಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಳ್ಳುವ ಯಾವುದೇ ಸಿಬ್ಬಂದಿಯನ್ನು ಪೊಲೀಸ್ ವೆರಿಫಿಕೇಶನ್‌ಗೆ ಒಳಪಡಿಸಬೇಕು. ಮಕ್ಕಳ ರಕ್ಷಣೆಯ ಹಿತದೃಷ್ಠಿಯಿಂದ ಇದನ್ನು ಕಡ್ಡಾಯವಾಗಿ ಅನುಸರಿಸಬೇಕು. ಬಾಡಿಗೆ ಕಟ್ಟಡಗಳಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಕಿಟ್‌ಗಳನ್ನು ಸಕಾಲದಲ್ಲಿ ವಿತರಿಸಬೇಕು. ವಸತಿ ನಿಲಯಗಳಲ್ಲಿ ಸಾರ್ವಜನಿಕರಿಂದ ಆಗುವ ಯಾವುದೇ ಹಾನಿ, ಗಲಾಟೆಗೆ ಸಂಬAಧಿಸಿದAತೆ ಪೊಲೀಸ್ ಠಾಣೆಗೆ ದೂರು ಸಲ್ಲಿಸಿ ಸೂಕ್ತ ರಕ್ಷಣೆ ಪಡೆಯಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಮಕ್ಕಳನ್ನು ಎತ್ತಿಕೊಂಡು ಭಿಕ್ಷಾಟನೆ ಮಾಡುವ ಪೋಷಕರು ಹಾಗೂ ಭಿಕ್ಷಾಟನೆಯಲ್ಲಿ ತೊಡಗಿದ ಮಕ್ಕಳನ್ನು ರಕ್ಷಿಸಿ ಅಗತ್ಯ ಪುನರ್ವಸತಿ ಕಲ್ಪಿಸಬೇಕು ಎಂದು ಅಧಿಕಾರಿಳಿಗೆ ಅವರು ತಿಳಿಸಿದರು.

ಆರೋಗ್ಯ ಇಲಾಖೆಯಲ್ಲಿ ದಾಖಲಾಗುವ ಅಪ್ರಾಪ್ತ ಗರ್ಭಿಣಿಯರ ಪ್ರಕರಣಗಳ ಬಗ್ಗೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೋಕ್ಸೋ ಕಾಯ್ದೆಯ ಕಲಂ 19 ರಡಿಯಲ್ಲಿ ಮೊದಲು ಮಾಹಿತಿ ಬಂದವರು ಪ್ರಕರಣ ದಾಖಲಿಸಲು ಅವಕಾಶವಿದ್ದು, ಅದನ್ನು ಪಾಲಿಸಬೇಕು. ಆರ್‌ಸಿಎಚ್ ಪೋರ್ಟಲ್‌ನಲ್ಲಿ ದಾಖಲಾದ 14 ರಿಂದ 17 ವರ್ಷದೊಳಗಿನ ಬಾಲಗರ್ಭಿಣಿಯರ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಬೇಕು. ಬಾಲಕಿಯ ವಯಸ್ಸಿನ ದೃಢೀಕರಣಕ್ಕೆ ಜನನ ಪ್ರಮಾಣ ಪತ್ರ ಮತ್ತು ಶಾಲಾ ದಾಖಲಾತಿಗಳನ್ನು ಪರಿಶೀಲಿಸಬೇಕು. ಶಾಲಾ ಮುಖ್ಯಸ್ಥರು ಬಾಲ್ಯವಿವಾಹ ಮತ್ತು ಪೋಕ್ಸೋ ಪ್ರಕರಣಗಳಲ್ಲಿ ಶೀಘ್ರ ಮಾಹಿತಿ ಒದಗಿಸಬೇಕು. ಪ್ರಸ್ತುತ ಜಿಲ್ಲೆಯಲ್ಲಿ ದಾಖಲಾದ ಬಾಲ/ಅಪ್ರಾಪ್ತ ವಯಸ್ಸಿನ ಗರ್ಭಿಣಿಯರ ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಿಸಿ ಆ ಬಗ್ಗೆ ಒಂದು ತಿಂಗಳಲ್ಲಿ ಸಂಪೂರ್ಣ ವರದಿಯನ್ನು ಆಯೋಗಕ್ಕೆ ಸಲ್ಲಿಸಬೇಕು. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುವ ಸ್ಕಾö್ಯನಿಂಗ್ ಸೆಂಟರ್‌ಗಳಲ್ಲಿ ಭ್ರೂಣಲಿಂಗ ಪತ್ತೆ, ಆಸ್ಪತ್ರೆಗಳಲ್ಲಿ ನಡೆಯುವ ಭ್ರೂಣ ಹತ್ಯೆಗಳ ಬಗ್ಗೆ ಅಧಿಕಾರಿಗಳು ಎಚ್ಚರಿಕೆಯಿಂದ ಇದ್ದು, ನಿಯಮಿತವಾಗಿ ಪರಿಶೀಲನೆ ನಡೆಸಬೇಕು. ಮಕ್ಕಳ ರಕ್ಷಣೆಯ ವಿಷಯದಲ್ಲಿ ಆಯೋಗವು ಅಧಿಕಾರಿಳಿಗೆ ಸಂಪೂರ್ಣ ಬೆಂಬಲ ಹಾಗೂ ಸಹಕಾರ ನೀಡುತ್ತದೆ. ಆದ್ದರಿಂದ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಪ್ರಕರಣ ದಾಖಲಿಸಿ ಎಂದು ಅವರು ಅಧಿಕಾರಿಗಳಿಗೆ ಭರವಸೆ ನೀಡಿದರು.

ಶಾಲೆಯಿಂದ ಹೊರಗುಳಿದ ಮಕ್ಕಳು, ಬಾಲ ಕಾರ್ಮಿಕರು, ಬಾಲ ಗರ್ಭಿಣಿಯರು, ಮಕ್ಕಳ ಅಕ್ರಮ ಸಾಗಾಣಿಕೆ, ಮಕ್ಕಳ ಭಿಕ್ಷಾಟನೆ ಮುಂತಾದ ವಿಷಯಗಳ ಬಗ್ಗೆ ಚರ್ಚಿಸಿ, ಸಂತ್ರಸ್ತ ಮಕ್ಕಳಿಗೆ ಸೂಕ್ತ ಪುನರ್ವಸತಿ ಕಲ್ಪಿಸುವ ಕುರಿತಂತೆ ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ ಅವರ ಅಧ್ಯಕ್ಷತೆಯಲ್ಲಿ ನಿಯಮಿತವಾಗಿ ಸಭೆಗಳನ್ನು ಆಯೋಜಿಸಬೇಕು. ಎಲ್ಲ ಸರ್ಕಾರಿ ಸಂಸ್ಥೆ, ಕಚೇರಿಗಳಲ್ಲಿ ಮಕ್ಕಳ ಸಹಾಯವಾಣಿಯ ಬಗ್ಗೆ ಮಾಹಿತಿ ಫಲಕ ಅಳವಡಿಸಬೇಕು. ಗ್ರಾಮ ಪಂಚಾಯತಿಗಳಲ್ಲಿ ನಿಯಮಿತವಾಗಿ ಮಕ್ಕಳ ಗ್ರಾಮಸಭೆ ನಡೆಸಬೇಕು. ಮಕ್ಕಳ ಗ್ರಾಮ ಸಭೆಯಲ್ಲಿ ಬಾಲ್ಯವಿವಾಹದ ದುಷ್ಪರಿಣಾಮ, ಶಿಕ್ಷೆಗಳ ಬಗ್ಗೆ ಜಾಗೃತಿ ಮೂಡಿಸಬೇಕು. ಸ್ಥಳೀಯ ಸಂಸ್ಥೆಗಳಿAದ ನಗರ, ಗ್ರಾಮೀಣ ಪ್ರದೇಶಗಳಲ್ಲಿ ಕಸ ಸಂಗ್ರಹಕ್ಕಾಗಿ ಸಂಚರಿಸುವ ವಾಹನಗಳಲ್ಲಿಯೂ ಬಾಲ್ಯವಿವಾಹದ ದುಷ್ಪರಿಣಾಮ, ಶಿಕ್ಷೆಯ ಬಗ್ಗೆ ಜಿಂಗಲ್ಸ್ಗಳನ್ನು ಪ್ರಸಾರ ಮಾಡಬೇಕು. ಜಿಲ್ಲೆಯಲ್ಲಿರುವ ವಿಕಲಚೇತನ ಮಕ್ಕಳಿಗೆ ಯು.ಡಿ.ಐ.ಡಿ ಕಾರ್ಡ್ಗಳನ್ನು ಒದಗಿಸಿ, ಸರ್ಕಾರದ ಸೌಲಭ್ಯ ಪಡೆಯಲು ಅನುಕೂಲ ಕಲ್ಪಿಸಬೇಕು ಎಂದು ಸದಸ್ಯರು ಅಧಿಕಾರಿಗಳಿಗೆ ತಿಳಿಸಿದರು.

ಜಿಲ್ಲೆಯ ವಿವಿಧ ಅಭಿವೃದ್ಧಿ ನಿಗಮಗಳಿಂದ ಸರ್ಕಾರದ ವಿವಿಧ ಯೋಜನೆಗಳಲ್ಲಿ ಫಲಾನುಭವಿಗಳಿಗೆ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ಫಲನುಭವಿಗಳಿಗೆ ಸೌಲಭ್ಯ ಒದಗಿಸುವಾಗ ಫಲಾನುಭವಿಗಳಿಂದ ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸುವ ಬಗ್ಗೆ, ಬಾಲ್ಯ ವಿವಾಹ ಮಾಡುವುದಿಲ್ಲ ಎಂಬುದರ ಬಗ್ಗೆ ಹಾಗೂ ಒಂದು ವೇಳೆ ಮಕ್ಕಳನ್ನು ಶಾಲೆ ಬಿಡಿಸಿ, ಮಕ್ಕಳಿಗೆ ಬಾಲ್ಯವಿವಾಹ ಮಾಡಿದಲ್ಲಿ ಸರ್ಕಾರದ ಯೋಜನೆಯ ಸೌಲಭ್ಯವನ್ನು ಹಿಂಪಡೆಯುತ್ತೇನೆ ಎಂಬುದಾಗಿ ಬದ್ಧತಾ ಪತ್ರವನ್ನು ನಿಗಮಗಳು ಪಡೆಯಬೇಕು. ಜಿಲ್ಲೆಯಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳಿದ್ದು, ಅವರಿಗೆ ಕ್ರೀಡಾ ವಸತಿ ನಿಲಯದ ಬಗ್ಗೆ ಮಾಹಿತಿ ಇರುವುದಿಲ್ಲ. ಆದ್ದರಿಂದ ಕ್ರೀಡಾ ವಸತಿ ನಿಲಯ ಮತ್ತು ಅದರ ಸೌಲಭ್ಯಗಳ ಬಗ್ಗೆ ಗ್ರಾಮೀಣ ಭಾಗದಲ್ಲಿ ಹೆಚ್ಚು ಜಾಗೃತಿ ಮೂಡಿಸಬೇಕು. ಜಿಲ್ಲೆಯ ಮದರಸಾಗಳಲ್ಲಿರುವ ವಿದ್ಯಾರ್ಥಿಗಳು ಔಪಚಾರಿಕ ಶಿಕ್ಷಣದಿಂದ ವಂಚಿತರಾಗದಂತೆ ಶಾಲಾ ಅವಧಿಯಲ್ಲಿ ಮದರಸಾದ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸುವಂತೆ ಮದರಸಾದ ಮೌಲ್ವಿಗಳಿಗೆ ವಕ್ಫ್ ಅಧಿಕಾರಿಗಳು ಸೂಚನೆ ನೀಡಬೇಕು. ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪುವ ಪ್ರಕರಣಗಳು ಸಂಭವಿಸದಂತೆ ಕೃಷಿ ಇಲಾಖೆ ಅಥವಾ ಜಮೀನು ಮಾಲೀಕರು ಕೃಷಿ ಹೊಂಡಕ್ಕೆ ಸೂಕ್ತ ತಡೆಗೋಡೆ, ಫೆನ್ಸಿಂಗ್ ನಿರ್ಮಿಸಬೇಕು ಎಂದು ಸಂಬAಧಿಸಿದ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಅಪ್ರಾಪ್ತ ವಯಸ್ಸಿನಲ್ಲಿ ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಬಾಲಾಪರಾಧಿಗೆ ಸೂಕ್ತ ಕೌನ್ಸೆಲಿಂಗ್ ನಡೆಸಿ, ಮುಂದಿನ ದಿನಗಳಲ್ಲಿ ಅಂತಹ ಕೃತ್ಯಗಳಲ್ಲಿ ಭಾಗಿಯಾಗದಂತೆ ಮನವೊಲಿಸಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆಗೆ ನಿರ್ಬಂಧವಿದ್ದು, ಇದನ್ನು ಮೀರಿದ ಸಂದರ್ಭದಲ್ಲಿ ಮಕ್ಕಳ ಪೋಷಕರಿಗೆ ರೂ.25 ಸಾವಿರಗಳ ದಂಡ ವಿಧಿಸುವುದರ ಜೊತೆಗೆ ಪೋಷಕರ ವಾಹನ ಚಾಲನಾ ಪರವಾನಿಗೆಯನ್ನು ರದ್ದುಪಡಿಸಬೇಕು ಎಂದು ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು.

ಡಿವೈಎಸ್‌ಪಿ ಮುತ್ತಣ್ಣ ಸವರಗೋಳ ಅವರು ಮಾತನಾಡಿ, ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗುತ್ತದೆ. ಪ್ರಸ್ತುತ ಸಾಮಾಜಿಕ ಜಾಲತಾಣಗಳು, ಟಿ.ವಿ., ಸಿನೆಮಾ, ಮೊಬೈಲ್ ಬಳಕೆಯಿಂದ ಮಕ್ಕಳು ವಯಸ್ಸಿಗಿಂತ ಹೆಚ್ಚಿನ ತಿಳುವಳಿಕೆ ಪಡೆಯುತ್ತಿದ್ದು, ಅದನ್ನು ನಕಾರಾತ್ಮಕ ವಿಷಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಒಂದು ಹಂತದಲ್ಲಿ ಮನಸ್ಸು ವಿಕೃತಗೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ. ಇದಕ್ಕೆ ಸಾಮಾಜಿಕ ಹಾಗೂ ಕೌಟುಂಬಿಕ ಕಾರಣಗಳೂ ಪ್ರಮುಖ ಪಾತ್ರ ವಹಿಸುತ್ತವೆ. ಆದ್ದರಿಂದ ಮಕ್ಕಳ ವಿಷಯದಲ್ಲಿ ಕೇವಲ ಸರ್ಕಾರ, ಆಯೋಗ ಮಾತ್ರವಲ್ಲ ಮಕ್ಕಳ ಪೋಷಕರೂ ಕೂಡ ಜವಾಬ್ದಾರಿಯಿಂದ ತಮ್ಮ ಕರ್ತವ್ಯ ಪಾಲಿಸಬೇಕು. ಉತ್ತಮ ವಾತಾವರಣ ನಿರ್ಮಿಸಿ, ಮಕ್ಕಳ ಮನೋ-ದೈಹಿಕ ಬೆಳವಣಿಗೆಗೆ ಪೂರಕ ಪರಿಸರ ನಿರ್ಮಿಸಬೇಕು ಎಂದು ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಸಾವಿತ್ರಿ ಬಿ.ಕಡಿ, ಜಿಲ್ಲಾ ಪಂಚಾಯತಿಯ ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ತಿಪ್ಪಣ್ಣ ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ, ಸೇರಿದಂತೆ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸAಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!