2c136fae-be38-4577-97e1-318669006cc9

ಕಾನೂನು ಪದವೀಧರರಿಗೆ ತರಬೇತಿ ಭತ್ಯೆ ಮಂಜೂರಿಗೆ ಅರ್ಜಿ ಆಹ್ವಾನ

ಕರುನಾಡ ಬೆಳಗು ಸುದ್ದಿ

ಕೊಪ್ಪಳ, 23- 2024-2025 ನೇ ಸಾಲಿಗೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯಲ್ಲಿ ಕಾನೂನು ಪದವಿ ಪಡೆದಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3ಬಿ ಜನಾಂಗದ ಅಭ್ಯರ್ಥಿಗಳಿಗೆ 4 ವರ್ಷಗಳ ಅವಧಿಗೆ ತರಬೇತಿ ಭತ್ಯೆ ಮಂಜೂರಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕಾನೂನು ತರಬೇತಿಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಅರ್ಜಿ ಸ್ವೀಕರಿಸಲು ನಿಗದಿ ಪಡಿಸಿದ ಕೊನೆಯ ದಿನಾಂಕಕ್ಕೆ 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಪ್ರವರ್ಗ-1 ಕ್ಕೆ ಗರಿಷ್ಠ 40 ವರ್ಷಗಳು ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ. ಪ್ರವರ್ಗ-1 ರ ಅಭ್ಯರ್ಥಿಗಳ ವಾರ್ಷಿಕ ಅದಾಯ ರೂ. 3.50 ಲಕ್ಷ ಹಾಗೂ ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ವಾರ್ಷಿಕ ಆದಾಯ ರೂ.2.50 ಲಕ್ಷಗಳು ಮೀರಿರಬಾರದು.

ನಿಗದಿತ ಅರ್ಜಿಯನ್ನು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾಡಳಿತ ಭವನ, ಕೊಪ್ಪಳ ಇವರಿಂದ ಪಡೆದು, ಸಂಬAಧಿಸಿದ ದಾಖಲೆಗಳ ನಕಲು ಪ್ರತಿಗಳನ್ನು ದೃಢೀಕರಿಸಿ, ಆಗಸ್ಟ್ 20 ರೊಳಗೆ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!